ನವದೆಹಲಿ, ಜುಲೈ 27:ಪ್ರಧಾನಿ ನರೇಂದ್ರ ಮೋದಿ ಇಂದು (ಜುಲೈ 27) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kissan)ಯ 14 ನೇ ಕಂತಿನ ಹಣ ಬಿಡುಗಡೆ ಮಾಡಿದರು.ಪ್ರಧಾನಿ ಮೋದಿ ಅವರು ಜುಲೈ 27 ರಂದು ರಾಜಸ್ಥಾನ ಮತ್ತು ಜುಲೈ 28 ರಂದು ಗುಜರಾತ್‌ನಲ್ಲಿ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಇರಲಿದ್ದಾರೆ.ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ಹಣ ಜಮಾ ಮಾಡುವ ಪ್ರಕ್ರಿಯೆಗೆ ಪ್ರಧಾನಿ ಚಾಲನೆ ನೀಡಿದರು. ಕಿಸಾನ್ ಸಮ್ಮಾನ್ ನಿಧಿಯ 14 ನೇ ಕಂತಿನಲ್ಲಿ ಸುಮಾರು 8.5 ಕೋಟಿ ಅರ್ಹ ರೈತರಿಗೆ 17,000 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.ಪ್ರಧಾನಿ ಮೋದಿ ಇಂದು ರೈತರಿಗೆ ಅನುಕೂಲವಾಗುವಂತೆ 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ.ಇಕೆವೈಸಿ ಮಾಡದವರಿಗೆ 14ನೇ ಕಂತಿನ ಹಣ ಸಿಗುವುದಿಲ್ಲ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಹೋಗಿ ಫಲಾನುಭವಿಗಳು ಸುಲಭವಾಗಿ ಕೆವೈಸಿ ಅಪ್ಡೇಟ್ ಮಾಡಬಹುದು,pmkisan.gov.in ವೆಬ್ಸೈಟ್ನಲ್ಲಿ ಫಲಾನುಭವಿಗಳ ಪಟ್ಟಿ ಪರಿಶೀಲಿಸಬಹುದು