ಶಿವಮೊಗ್ಗ;ರೆವಿನ್ಯೂ ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.ಕಟ್ಟಡ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರಿಗೆ ಎನ್‌ಒಸಿ ಕೊಡಲು ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುತ್ತಿದ್ದ ವೇಳೆ ಮಹಾನಗರ ಪಾಲಿಕೆ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.5 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ವಡ್ಡಿನಕೊಪ್ಪ ಗ್ರಾಮದ ಹಾಲೇಶ್ ಎಂಬುವರ ದೂರು ಆಧರಿಸಿ, ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ಅವರ ಸೂಚನೆ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.