Revenue Facts

ಕರ್ನಾಟಕ ಪ್ರಗತಿಪರ ರಾಜ್ಯಸರ್ಕಾರದ ಸಾಧನೆಗಳ ಸಿಂಹಾವಲೋಕನ ;ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕ ಪ್ರಗತಿಪರ ರಾಜ್ಯಸರ್ಕಾರದ ಸಾಧನೆಗಳ ಸಿಂಹಾವಲೋಕನ ;ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು. ಈ ವೇಳೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegade Kageri) ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲರ ಪಕ್ಕದ ಆಸನದಲ್ಲಿ ಆಸೀನರಾಗಿದ್ದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ ಮೂಲಕ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು.

ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸರ್ಕಾರ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯನ್ನು ಅನುಕರಣೆ ಮಾಡುತ್ತಿದೆ. ರೈತರನ್ನು ಸಧೃಡಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿ ತಂದಿದೆ ಎಂದು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.ಇಂದು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದ ರಾಜ್ಯಪಾಲರು, ತಮ್ಮ 34 ಪುಟಗಳ ಭಾಷಣದಲ್ಲಿ ಸರ್ಕಾರದ ಸಾಧನೆಗಳ ಸಿಂಹಾವಲೋಕನ ಮಾಡಿದರು.

ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ ನಿಗಮದಲ್ಲಿ ಮಹಿಳೆಯರಿಗೆ 50% ಮೀಸಲಾತಿ .ಚಾಮರಾಜನಗರ ಜಿಲ್ಲೆಯಲ್ಲಿ ವಿಶೇಷ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಮೆಡಿಕಲ್ ಆಸ್ಪತ್ರೆಯನ್ನೂ ತೆರೆಯಲಾಗಿದೆ ಎಂದರು.ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್​ಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಮಹಿಳಾ ಸ್ವಾಸ್ಥ್ಯ ಕೇಂದ್ರಗಳು ಸಾರ್ವಜನಿಕ ಸೇವೆಗೆ ಶೀಘ್ರವೇ ಲೋಕಾರ್ಪಣೆಗೊಳಿವೆ.ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು ಮತ್ತಿತರಿಗೆ ವಿಸ್ತರಣೆ ಮಾಡಲಾಗಿದೆ. 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.

ರೈತರನ್ನು ಸಧೃಡಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿ ತಂದಿದೆ. ರೈತಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂ. ಡೀಸೆಲ್ ಸಹಾಯಧನ ನೀಡಲಾಗಿದೆ,ಕೃಷಿ ಸಂಜೀವಿನಿ ಯೋಜನೆಯಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ 5300 ಕೋಟಿ ಹಣ ನೀಡಿರುವ ಕೇಂದ್ರ ಸರ್ಕಾರದ ಬಗ್ಗೆಯೂ ಭಾಷಣದಲ್ಲಿ ಪ್ರಸ್ತಾಪಿಸಿದರು. ಜಾನುವಾರು ಸಂರಕ್ಷಣೆ ಮಾಡಲು ರಾಜ್ಯ ಸರ್ಕಾರದಿಂದ 100 ಹೊಸ ಸರ್ಕಾರಿ ಗೋಶಾಲೆಗಳನ್ನು .ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಒಂದು ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಮರಣ ಹೊಂದಿದ ಕರು, ದನ, ಎತ್ತುಗಳಿಗೆ ಪರಿಹಾರ ನೀಡಲು ಸರ್ಕಾರದಿಂದ 37 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.ವಿದ್ಯಾರ್ಥಿನಿಯರಿಗೆ ಆತ್ಮಸೈರ್ಯ ಹೆಚ್ಚಿಸಲು ‘ಓಬವ್ವ ಆತ್ಮ ರಕ್ಷಣಾ ಕಲೆ’ ತರಬೇತಿಯನ್ನು ಪ್ರಾರಂಭಿಸಲಾಗಿದೆ.

ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗಳಷ್ಟು ಉಚಿತ ವಿದ್ಯುತ್ ನೀಡಲಾಗುತ್ತಿದೆ.100 ಅಂಬೇಡ್ಕರ್ ಹಾಸ್ಟೆಲ್‌ಗಳ ನಿರ್ಮಾಣವನ್ನೂ ಕೈಗೆತ್ತಿಕೊಳ್ಳಲಾಗಿದೆ.ನಿರುದ್ಯೋಗ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ರೋಜ್​ಗಾರ್ ನೀತಿ ತಂದಿದೆ.ವಿಜಯಪುರ, ಹಾಸನ ಏರ್​ಪೋರ್ಟ್ ನಿರ್ಮಾಣ ಕಾರ್ಯ ಮುಗಿದಿದ್ದು, ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.ಕಳಸಾ-ಬಂಡೂರ ನಾಲಾ ತಿರುವ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಸಮ್ಮತಿಸಿದೆ , ಎತ್ತಿನ ಹೊಳೆ ಸಮಗ್ರ ಕುಡಿಯು ನೀರಿನ ಯೋಜನೆಯಡಿ, ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ 527 ಕೆರೆಗಳಿಗೆ ನೀರು ತುಂಬಿಸಲಾಗುವುದು.ಎಂದು ರಾಜ್ಯಪಾಲರು ವಿವರಿಸಿದರು.

Exit mobile version