Revenue Facts

ಬೆಂಗಳೂರಲ್ಲಿ ಸೇಫ್ ಸಿಟಿ ಕಮಾಂಡ್ ಸೆಂಟರ್ ಆರಂಭ

#Safe City #Command Center #started # Bangalore

ಬೆಂಗಳೂರು : ಬೆಂಗಳೂರು ನಗರದ ಅಲಿ ಅಸ್ಗರ್ ರಸ್ತೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ನಿರ್ಭಯ ನಿಧಿಯಡಿ’ ನಿರ್ಮಿಸಲಾಗಿರುವ ದೇಶದ ಮೊದಲ ‘ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು.ಮಹಿಳೆಯರು ಮಕ್ಕಳ ಸುರಕ್ಷತೆಗಾಗಿ ದೇಶದಲ್ಲಿ ಮೊದಲ ಬಾರಿಗೆ ಸೇಫ್ ಸಿಟಿ ಯೋಜನೆಯಡಿ ಸುಸಜ್ಜಿತ ಬಹುಮಹಡಿ ಕಮಾಂಡ್ ಸೆಂಟರ್ (Command and Control Centre) ನಿರ್ಮಾಣವಾಗಿದೆ.ಕಮಾಂಡ್ ಸೆಂಟರ್‌’ನ್ನು ಬೆಂಗಳೂರು ನಗರ ಪೊಲೀಸರು ನಿರ್ಮಿಸಿದ್ದಾರೆ, ಈ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇವತ್ತು ನಿರ್ಭಯ ಯೋಜನೆ ಅಡಿಯಲ್ಲಿ ಸೇಫ್ ಸಿಟಿ ಮಾಡೋದಕ್ಕೆ ಕಮಾಂಡ್ ಕಂಟ್ರೋಲ್ ಸೆಂಟರ್ ಮಾಡಲಾಗಿದೆ.ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯಲು ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಹೆಚ್ಚಿಸಲು ಕಮಾಂಡ್ ಸೆಂಟರ್ ನಿರ್ಮಿಸಲಾಗಿದೆ. ಸುಮಾರು 661.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಮಾಂಡ್ ಸೆಂಟರ್‌ಗೆ ಕೇಂದ್ರ ಸರ್ಕಾರ ಶೇ.60 ಮತ್ತು ರಾಜ್ಯ ಸರ್ಕಾರ ಶೇ.40ರಷ್ಟು ಹಣ ಒದಗಿಸಿದೆ.ದೌರ್ಜನ್ಯ, ಅಪಘಾತ ಆದಾಗ ಜನರು ನೇರವಾಗಿ ಕರೆ ಮಾಡಬಹುದು. ತಕ್ಷಣ ಕಾರ್ಯ ಪ್ರವೃತರಾಗಲಿರುವ ಪೊಲೀಸರು ಏಳು ನಿಮಿಷಗಳ ಒಳಗೆ ಸ್ಪಾಟ್ ಗೆ ತಲುಪುತ್ತಾರೆ ಎಂದು ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಮಾತನಾಡಿದರು, ಮೊದಲ ಬಾರಿಗೆ ಬೆಂಗಳೂರಿನಲ್ಲಿ ಯೋಜನೆ ಉದ್ಘಾಟನೆಗೊಂಡಿದೆ. ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಸೇರಿದಂತೆ ಇತರ ದೌರ್ಜನ್ಯಗಳನ್ನು ತಡೆಗಟ್ಟುವುದು ಈ ಯೋಜನೆಯ ಆದ್ಯತೆ ಎಂದು ಸಿಎಂ ಹೇಳಿದರು.ಸೇಫ್ ಸಿಟಿ ಯೋಜನೆಯಡಿ ವಾಹನ ದಟ್ಟಣೆ ಹಾಗೂ ಜನದಟ್ಟಣೆ ಅಧಿಕವಿರುವ ಜಾಗ ಸೇರಿದಂತೆ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಸ್ಥಳ ಸೇರಿ 3 ಸಾವಿರ ಜಾಗಗಳಲ್ಲಿ ಈಗಾಗಲೇ ಸುಮಾರು 3500 ಸಿಸಿಟಿವಿ ಕ್ಯಾಮರ (CCTV Camera) ಅಳವಡಿಸಲಾಗಿದ್ದು, ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಇನ್ನೂ 4500 ಕ್ಯಾಮರ ಅಳವಡಿಸಲಿದೆ.‌ ಒಟ್ಟು 7500 ಆತ್ಯಾಧುನಿಕ ಕ್ಯಾಮರ ಅಳವಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version