Revenue Facts

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ಸಚಿವ ಎಂ.ಸಿ ಸುಧಾಕರ್

ಬೆಂಗಳೂರು;ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಕುರಿತು ಸಚಿವ ಎಂ.ಸಿ.ಸುಧಾಕ‌ರ್(M.C,Sudhakar) ಮಾತನಾಡಿದ್ದು, 5 ಸಾವಿರ ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ರೂ. ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ(Health insurance) ನೀಡಲಾಗುವುದು ಎಂದು ಸಚಿವರು ಘೋಷಿಸಿದರು.ಅತಿಥಿ ಉಪನ್ಯಾಸಕರಿಗೆ 5 ಸಾವಿರ ರೂ. ವೇತನ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಜನವರಿಯಿಂದಲೇ ವೇತನ ಹೆಚ್ಚಳ ಮಾಡಲಾಗುತ್ತದೆ. 5 ಲಕ್ಷದವರೆಗೆ ಆರೋಗ್ಯ ವಿಮೆ ನೀಡಲಾಗುತ್ತದೆ. ವರ್ಕ್ ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. ಇನ್ನು ಸಹಾಯಕ ಉಪನ್ಯಾಸಕರ ನೇಮಕಾತಿ ವೇಳೆ ಸೇವೆ ಪರಿಗಣಿಸಲಾಗುತ್ತದೆ. ಹೊಸದಾಗಿ ನೇಮಕಾತಿ ವೇಳೆ ಅತಿಥಿ ಉಪನ್ಯಾಸಕರಿಗೆ ಕೃಪಾಂಕ ನೀಡಲು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ,ನಾವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Exit mobile version