26.7 C
Bengaluru
Sunday, December 22, 2024

ಕಾವೇರಿ-2.0 ತಂತ್ರಾಂಶದಲ್ಲಿ ದಸ್ತಾವೇಜು ನೋಂದಣಿ ಪ್ರಕ್ರಿಯೆಗಳಿಗಾಗಿ ನಿಗದಿ ಪಡಿಸಿದ ಸಮಯ! ಇಲ್ಲಿದೆ ಸಂಪೂರ್ಣ ಮಾಹಿತಿ.

ಕಾವೇರಿ 2.0 ಬಂದ ನಂತರ ಸಾರ್ವಜನಿಕರು ತಮ್ಮ ಆಸ್ತಿ ರಿಜಿಸ್ಟ್ರೇಷನ್, ವಿವಾಹ ನೋಂದಣಿ, ಅಗ್ರಿಮೆಂಟ್ ನೋಂದಣಿ, ಜಿಪಿಎ ಕಾರ್ಯಗತ ಸೇರಿದಂತೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಿಗುವ ಬಹುತೇಕ ನೋಂದಣಿ ಪ್ರಕ್ರಿಯೆ ಆನ್ಲೈನ್ ನಲ್ಲಿಯೇ ಲಭ್ಯವಿದೆ. ಇದರಿಂದ ಸಾರ್ವಜನಿಕರು ಅನಾವಶ್ಯಕ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆಯುವುದು ತಪ್ಪಲಿದೆ. ಜತೆಗೆ ನಿಗದಿತ ಕಾಲ ಮಿತಿಯಲ್ಲಿ ಕೆಲಸ ಆಗಲಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುವ ಆಶಾಭಾವನೆ ಹೊಂದಲಾಗಿದೆ.

ಅದರಂತೆ ಕಾವೇರಿ-2.0 ತಂತ್ರಾಂಶದಲ್ಲಿ ದಸ್ತಾವೇಜುಗಳ ನೋಂದಣಿ ಯಲ್ಲಿ ಉಪನೋಂದಣಾಧಿಕಾರಿಗಳ ಪಾತ್ರ ಬಹಳ ಮಹತ್ವದ್ದಾಗಿರುತ್ತದೆ. ಕಾವೇರಿ-2.0 ತಂತ್ರಾಂಶದಲ್ಲಿ ಒದಗಿಸಲಾಗುವ ಸೇವೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳು ಮೊದಲು ಉಪನೋಂದಣಾಧಿಕಾರಿಗಳ ಲಾಗಿನ್ಗೆ ತಲುಪುವುದರಿಂದ ಅವುಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಉಪನೋಂದಣಾಧಿಕಾರಿಗಳು ಕಛೇರಿ ಸಮಯವನ್ನು ವಿವಿಧ ಕಾರ್ಯಗಳಿಗೆ ಈ ಕೆಳಗೆ ತಿಳಿಸಿರುವ ವೇಳಾಪಟ್ಟಿಯಂತೆ ಅಳವಡಿಸಿಕೊಳ್ಳಲಾಗಿದೆ:-

ಸಮಯ ಬೆಳಿಗ್ಗೆ 10.00 ರಿಂದ 11.00 ರವರೆಗೆ : ಕಾವೇರಿ-2.0 ತಂತ್ರಾಂಶದಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲನೆ

ಬೆಳಿಗ್ಗೆ 11.00 ರಿಂದ ಅಪರಾಹ್ನ 04.30 ರವರೆಗೆ : ಕಾವೇರಿ-2.0 ತಂತ್ರಾಂಶದಲ್ಲಿ ದಸ್ತಾವೇಜುಗಳ ನೋಂದಣಿ

ಅಪರಾಹ್ನ 04.30 ರಿಂದ 05.30 ರವರೆಗೆ : ಕಛೇರಿಯ ಪತ್ರ ವ್ಯವಹಾರ ಹಾಗೂ ಇನ್ನಿತರೆ ಕಾರ್ಯಗಳಿಗೆ

Related News

spot_img

Revenue Alerts

spot_img

News

spot_img