ಬೆಂಗಳೂರು, ಜ.15;ಮನೆ ಹಾಗೂ ತಮ್ಮ ಕುಟುಂಬಗಳ ಜೀವನ ನಿರ್ವಹಣೆಗಾಗಿ ರಾಜ್ಯದ ಎಲ್ಲಾ ಕುಟುಂಬದ ಮಹಿಳೆಯರಿಗೆ ಆರ್ಥಿಕ ನರವು ನೀಡು ಮಹಿಳೆಯರನ್ನು ಸಶಕ್ತರನ್ನಾಗಿಸಲು ‘ಸ್ತ್ರೀ ಸಾಮರ್ಥ್ಯ ಯೋಜನೆ’ಯನ್ನು ಫೆಭ್ರವರಿ ತಿಂಗಳ ಅಂತ್ಯದ ವೇಳೆ ಮಂಡಿಸಲಿರುವ ಬಜಟ್ ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸ್ತ್ರೀ ಸಾಮೃರ್ಥ್ಯ ಮತ್ತು ಸ್ತ್ರೀ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಕೋವಿಡ್ ಸಮಸ್ಯೆಗಳನ್ನು ಎದುರಿಸುವುದು ಮನೆ ನಿರ್ವಹಣೆ, ಕೋವಿಡ್ ಉಪಚಾರ, ಆರೋಗ್ಯ ಮುಂತಾದವುಗಳಿಗೆ ಸಹಾಯವಾಗುವಂತೆ ಪ್ರತಿ ಕುಟುಂಬಕ್ಕೆ ಅವರ ವೆಚ್ಚಕ್ಕೆ ಅನುಗುಣವಾಗಿ ರೂ 1,000 ದಿಂದ 2,000/- ರೂವರೆಗೂ ನೆರವು ನೀಡುವ ಯೋಜನೆ ಇದಾಗಲಿದೆ ಎಂದು ತಿಳಿಸಿದರು.
ಮಹಿಳೆಯರು, ಕಾರ್ಮಿಕರು, ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಜನರು ಸೇರಿದಂತೆ ದುಡಿಯುವ ವರ್ಗಕ್ಕೆ ಅನುಕೂಲವಾಗುವಂತೆ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ಗ್ರಾಮದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷದವರೆಗೂ ಸಹಾಯಧನ ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆ ಇದಾಗಲಿದೆ ಎಂದು ತಿಳಿಸಿದ್ದಾರೆ.


