ಬೆಂಗಳೂರು: ಟಿಕೆಟ್ ಸಿಗದ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಇಂದು ಅಧಿಕೃತವಾಗಿ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.
ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ನಾನು ಜನಸಂಘ, ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಕಳೆದ 6 ತಿಂಗಳಿನಿಂದ ಕಡೆಗಣಿಸಿದ್ದರು, ನನಗೆ ಗೌರವ ಕೊಡಲಿಲ್ಲ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.ಆರು ಬಾರಿ 1994ರಿಂದ ಸ್ಪರ್ಧೆ ಮಾಡಿದ್ದೇನೆ. ಇದು ಏಳನೇ ಬಾರಿ ನಾನು ಸ್ಪರ್ಧೆ ಮಾಡಬೇಕಾಗಿರುವುದು. ಸಹಜವಾಗಿ ಟಿಕೆಟ್ ಇಲ್ಲ ಅಂದಾಗ ಆಘಾತ ಆಯ್ತು, ವೇದನೆ ಆಯ್ತು. ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ .ಅಧಿಕಾರದ ಲಾಲಸೆಗಾಗಿ ನಾನು ಅಧಿಕಾರಕ್ಕೆ ಬಂದವನಲ್ಲ. ಜನ ಸಂಘದ ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆ ವಿಫಲಾದ ಕಾರಣ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರು. ಇದೀಗ ಕಾಂಗ್ರೆಸ್ ನಾಯಕರು ನಡೆಸಿದ ಮಾತುಕತೆ ಸಕ್ಸಸ್ ಆಗಿರುವ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.
ಶೆಟ್ಟರ್ ಮನೆಗೆ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿ ಸಂಧಾನ ಮಾತುಕತೆ ನಡೆಸಿದ್ದರು. ಆದರೆ ಈ ಮಾತುಕತೆ ವಿಫಲವಾದ ನಂತರ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.15 ದಿನಗಳ ಹಿಂದೆ ರಾಜಕೀಯ ನಿವೃತ್ತಿಯಾಗಬೇಕು ಎಂದು ಹೇಳಿದ್ದರೆ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳುತ್ತಿದ್ದೆ. ಆದರೆ ಯಾವುದೇ ಮಾಹಿತಿ ನೀಡದೆ ಕೊನೆಯವರೆಗೆ ಸತಾಯಿಸಿದ್ದಾರೆ. ಈ ಕಾರಣಕ್ಕೆ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ.ನಾನು ಮೊದಲೇ ನಿರ್ಧಾರ ಮಾಡಿದಂತೆ ಈ ಚುನಾವಣೆಯಲ್ಲಿ ನಿಲ್ಲುತ್ತೇನೆ. ಭಾರೀ ಮತಗಳ ಅಂತರದಿಂದ ಈ ಬಾರಿ ನನ್ನ ಗೆಲುವು ಶತಸಿದ್ಧ ಎಂದು ಹೇಳಿದ್ದಾರೆ