Revenue Facts

ಬೆಂಗಳೂರಿಗೆ ಜೆಡಿಎಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರಿಗೆ ಜೆಡಿಎಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರುಮೇ. 06 : ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು ಬೆಂಗಳೂರಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅಧ್ಯಕ್ಷತೆಯ ಸಮಿತಿ ಸಿದ್ಧಪಡಿಸಿದ ಜೆಡಿಎಸ್ ನಿಂದ ಪ್ರತ್ಯೇಕ ಪ್ರಣಾಳಿಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ರಾತ್ರಿ ಅವರು ಪದ್ನನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಸಮಿತಿ ಸದಸ್ಯರಾದ ಕುಪೇಂದ್ರ ರೆಡ್ಡಿ, ಕೆ.ಎ. ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಉಪಸ್ಥಿತರಿದ್ದರು.ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಾರ್ಡ್ನಲ್ಲಿ ತಲಾ 30 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ಬಡವರಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸುವುದು, ಮೆಟ್ರೊ ರೈಲು ಮಾರ್ಗದ ವಿಸ್ತರಣೆ ಮತ್ತು ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ಭರವಸೆಗಳನ್ನು ನೀಡಿದೆ.

ಬೆಂಗಳೂರಿಗೆ ಜೆಡಿಎಸ್‌ ನೀಡಿರುವ ಪ್ರಮುಖ ಭರವಸೆಗಳು:

* ಖಾಸಗಿ ಶಾಲೆಗಳಲ್ಲಿ ದುಡಿಯುವ 10,000ಕ್ಕಿಂತ ಕಡಿಮೆ ವೇತನದ ಶಿಕ್ಷಕರಿಗೆ ಸಹಾಯಧನ.

* ನಗರದ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು.

* ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಗ್ರಾಮಗಳಿಗೆ ಕೊಳವೆ ಮಾರ್ಗದ ಮೂಲಕ ಕುಡಿಯುವ ನೀರು ಪೂರೈಕೆ.

* ಸಭೆ ಸಮಾರಂಭಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧ.

* ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು.

* ಪಂಚರತ್ನ ಯೋಜನೆ ಅಡಿಯಲ್ಲಿ ಶಾಲಾ ಶಿಕ್ಷಣದಲಿ ಸುಧಾರಣೆ.

* ಬೆಂಗಳೂರು ಸಾರ್ವಜನಿಕ ಆರೋಗ್ಯ ಮಂಡಳಿ ರಚನೆ.

* ಎಲ್ಲ ವಾರ್ಡ್‌ಗಳಲ್ಲೂ 30 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ಆರಂಭ.

* ಮದರಸಾ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಶಾಲೆಗಳಲ್ಲೂ ಹೊಸ ಶಿಕ್ಷಣ ನೀತಿ ಜಾರಿ.

* ದೀರ್ಘ ಕಾಲದಿಂದ ನನೆಗುದಿಗೆ ಬಿದ್ದಿರುವ ಹೊರವರ್ತುಲ ರಸ್ತೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು.

* ಬೆಂಗಳೂರು ನಗರ ಮತ್ತು ಹೊರವಲಯ ಸೇರಿದಂತೆ ಸ್ಥಳೀಯ ರೈಲು ಯೋಜನೆ ಅನುಷ್ಠಾನ.

Exit mobile version