26.7 C
Bengaluru
Wednesday, January 22, 2025

ಶಕ್ತಿ ಯೋಜನೆ : ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಒರಿಜಿನಲ್ ಐಡಿ ಕಡ್ಡಾಯವಲ್ಲ.

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ(Shakti Free Bus Travel for Women Scheme) ನಿನ್ನೆ ಅಷ್ಟೇ ಚಾಲನೆ ಸಿಕ್ಕಿದ್ದು, ರಾಜ್ಯಾದ್ಯಂತ ನಿನ್ನೆ(ಭಾನುವಾರ) ಒಂದೇ ದಿನ ಅದರೆ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ಗಂಟೆ ವರೆಗೆ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇನ್ನು ರಾಜ್ಯದ ಹಲವೆಡೆ ಐಡಿ ಪ್ರೂಫ್ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿಗಳು ನಡೆದಿವೆ. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಹೇಳಿದೆ. ಈ ಮೂಲಕ ಒರಿಜಿನಲ್ ಐಡಿ ಬೇಕಾ? ಅಥವಾ ನಕಲು (ಝರಾಕ್ಸ್) ಪ್ರತಿ ಇದ್ದರೆ ಸಾಕಾ? ಎನ್ನುವ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ.

ಐಡಿ ಒರಿಜಿನಲ್ ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿತ್ತು. ಇದು ಮಹಿಳಾ ಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದರಿಂದ ಕೆಲವೆಡೆ ಗಲಾಟೆಗಳು ಸಹ ಆಗುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ, ತಿದ್ದುಪಡಿ ಆದೇಶ ಹೊರಡಿಸಿದ್ದು, ಆಧಾರ್ ಕಾರ್ಡ್ ಹಾಗೂ ವೋಟರ್ ಐಡಿಯ ಝರಾಕ್ಸ್ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಇಂದು(ಜೂನ್ 12) ಎರಡನೇ ದಿನ ಮಹಿಳೆಯರು ಖಾಸಗಿ ವಾಹನಗಳನ್ನು ಬಿಟ್ಟು ಸರ್ಕಾರಿ ಬಸ್ಗಳ ಮೊರೆ ಹೋಗಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಂದಲೇ ತುಂಬು ತುಳುಕುತ್ತಿವೆ. ಇನ್ನು ನಿನ್ನೆ(ಭಾನುವಾರ) ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳಲ್ಲಿ 1,93,831 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದು ಇವರ ಪ್ರಯಾಣದ ಮೌಲ್ಯ 58,16,178 ರೂಪಾಯಿ. ಬಿಎಂಟಿಸಿ ಬಸ್ನಲ್ಲಿ ಒಟ್ಟು 2,01,215 ಮಹಿಳೆಯರು ಪ್ರಯಾಣ ಮಾಡಿದ್ದರೆ(ಪ್ರಯಾಣಿಕರ ಮೌಲ್ಯ 26,19604.00), ವಾಯವ್ಯ ಸಾರಿಗೆ ಬಸ್ನಲ್ಲಿ 1,22,354 ಮಹಿಳೆಯರು ಓಡಾಡಿದ್ದಾರೆ(ಪ್ರಯಾಣದ ಮೌಲ್ಯ ( 36,17,096.00). ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623 ಮಹಿಳೆಯರು ಪ್ರಯಾಣ ಮಾಡಿದ್ದಾರೆ(ಪ್ರಯಾಣದ ಮೌಲ್ಯ-19.70.0000.00). ಹೀಗೆ ನಿನ್ನೆ ಸಾರಿಗೆ ಬಸ್ಗಳಲ್ಲಿ ಒಟ್ಟು 5,71,023 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ವೆಚ್ಚ 1,40,22,878 ರೂ. ಆಗಿದ್ದು, ಈ ಹಣವನ್ನು ಸರ್ಕಾರವೇ ಸಾರಿಗೆ ಸಂಸ್ಥೆಗಳಿಗೆ ನೀಡಲಿದೆ.
ಇದು 11 ಗಂಟೆಗಳ ಅಂಕಿ ಅಂಶಗಳು ಮಾತ್ರ. ಇನ್ನು ನಿನ್ನೆ ಭಾನುವಾರವಾಗಿದ್ದರಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿನಿಯರು, ಖಾಸಗಿ ಸರಕಾರಿ ಕಚೇರಿಗಳಿಗೆ ತೆರಳುವ ನೌಕರರು ಪ್ರಯಾಣ ಮಾಡಿಲ್ಲ. ಆದ್ದರಿಂದ ಇಂದು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಬಹುದು.

Related News

spot_img

Revenue Alerts

spot_img

News

spot_img