21.4 C
Bengaluru
Saturday, July 27, 2024

ಶಕ್ತಿ ಯೋಜನೆ:ಮೊಬೈಲ್‌ನಲ್ಲೇ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಿ

#Shakti Yojana #Aadharcard #mobile #travel #Free

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ(Free bus travel) ಸಂಬಂಧಿಸಿ ಕೆಎಸ್‌ಆರ್‌ಟಿಸಿ ವತಿಯಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ.ಇನ್ನು ಮುಂದೆ ಮೊಬೈಲ್‌ನಲ್ಲಿಯೇ ಆಧಾರ್ ಕಾರ್ಡ್(Aadharcard) ತೋರಿಸಿ ‘ಶಕ್ತಿ ಯೋಜನೆ’ಯಡಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇಷ್ಟು ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮೂಲ ಆಧಾರಕಾರ್ಡ್‌ ತೋರಿಸಬೇಕಿತ್ತು. ಈ ಆದೇಶ ತಿದ್ದುಪಡಿ ಮಾಡಿ, ಆಧಾರ್ ಸಾಫ್ಟ್ ಕಾಪಿ(softcopy) ಮೊಬೈಲ್‌ನಲ್ಲಿ ಇಟ್ಟುಕೊಂಡು, ಅದನ್ನೇ ನಿರ್ವಾಹಕರಿಗೆ (Conducter)ತೋರಿಸಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ. ಇದರಿಂದ ನಿರ್ವಾಹಕರು-ಪ್ರಯಾಣಿಕರ ನಡುವಿನ ವಾಗ್ವಾದಕ್ಕೆ ಕಡಿವಾಣ ಹಾಕಿದಂತೆ ಆಗುತ್ತದೆ.ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲ, ನಕಲು, ಡಿಜಿ ಲಾಕರ್(DG loker) ಪ್ರತಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಸರ್ಕಾರದ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ), ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ, ಬೆಂಗಳೂರು ಅವರು ತಿಳಿಸಿರುತ್ತಾರೆ ಎಂದು ಹೇಳಿದೆ.

Related News

spot_img

Revenue Alerts

spot_img

News

spot_img