23.2 C
Bengaluru
Thursday, January 23, 2025

ಶಿವರಾಮ ಕಾರಂತ ಬಡಾವಣೆ ಸಂತ್ರಸ್ತರ ಸಂಘ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು, ಮಾ. 14 : ರೈತರ ಜಮೀನಿನಲ್ಲಿ ಡಾ| ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಿರ್ಧರಿಸಿದೆ. ಇದಕ್ಕಾಗಿ 1894 ರಡಿಯಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ 17 ಗ್ರಾಮಗಳ ರೈತರ, ದಲಿತರ, ಹಿಂದುಳಿದ ವರ್ಗಗಳ ಹಾಗೂ ಇತರೆ ಸಮುದಾಯಗಳ ಜನರಿಗೆ ಸೇರಿದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿದೆ. ಒಟ್ಟು 17 ಗ್ರಾಮಗಳ 3546 ಎಕರೆ 12 ಗುಂಟೆ ಜಮೀನಿನಲ್ಲಿ ಶಿವರಾಮ ಕಾರಂತ ಬಡಾವಣೆಯನ್ನು ಬಿಡಿಎ ಅಭಿವೃದ್ಧಿ ಪಡಿಸಲಿದೆ. ಆದರೆ, ಈ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಪ್ರಭಾವಿಗಳ ಜಮೀನನ್ನು ಕೈ ಬಿಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಶ್ರೀಮಂತರು ಹಾಗೂ ಪ್ರಭಾವಿಗಳ ಜಾಗವನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ನಿನ್ನೆ ಪ್ರಕರಣವನ್ನು ವಜಾಗೊಳಿಸಿದೆ. ಡಾ.ಶಿವರಾಮ ಕಾರಂತ ಬಡಾವಣೆ ಸಂತ್ರಸ್ತರ ಸಂಘ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಪರಿಗಣಿಸಲು ನಿರಾಕರಿಸಿದೆ. ಈ ಪ್ರಕರಣ ಸಂಬಂಧ 2018ರ ಆಗಸ್ಟ್‌ 3ರಂದು ತೀರ್ಪು ನೀಡಿತ್ತು.

ಹಾಗಾಗಿ ಈ ಅರ್ಜಿಯನ್ನು ಮತ್ತೆ ಈಗ ಈ ಕೈಗೆತ್ತಿಕೊಳ್ಳಲು ಸಾಧ್ಯವಾಗದು ಎಂದು ಹೇಳಿದೆ. ಸಂಘದ ಪರ ವಾದ ಮಂಡಿಸಿದ ವಕೀಲರು ಬಿಡಿಎ ಹಲವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಉತ್ತರ ಭಾಗದಲ್ಲಿ 3,526 ಎಕರೆ ಸ್ವಾಧೀನಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು.

ಆದರೆ, ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿಯು ವರದಿಯನ್ನು ತಯಾರಿಸಿತ್ತು. ಅದರಲ್ಲಿ ಶ್ರೀಮಂತರು ಹಾಗೂ ಪ್ರಭಾವಿಗಳ 300ಕ್ಕೂ ಅಧಿಕ ಆಸ್ತಿಗಳನ್ನು ಭೂಸ್ವಾಧೀನದಿಂದ ಕೈಬಿಡಲಾಗಿದೆ ಈ ಬಗ್ಗೆ ಶಿಫಾರಸು ಮಾಡಿರುವುದರ ಬಗ್ಗೆ ತಿಳಿಸಿತ್ತು. ಇದೇ ವಿಚಾರವನ್ನು ಕೋರ್ಟ್‌ ನಲ್ಲಿ ವಾದ ಮಂಡಿಸಲಾಗಿತ್ತು. ಅಷ್ಟೇ ಅಲ್ಲದೇ, ಕಾನೂನಿನ ಪ್ರಕಾರವಾಗಿ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿಲ್ಲ. ರೈತರಿಗೆ ಸರಿಯಾದ ಪರಿಹಾರವನ್ನು ನೀಡುತ್ತಿಲ್ಲ. ಭೂ ಸ್ವಾಧೀನ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ವಿವಾದಾತ್ಮಕವಾದ ಅಧಿಸೂಚನೆಗಳನ್ನು ಹೊರಡಿಸುತ್ತಿದ್ದಾರೆ. ಇದು ಏಕ ಪ್ರಕಾರವಾಗಿಲ್ಲ. ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತಿದೆ ಎಂದು ಹೇಳಲಾಗಿತ್ತು.

Related News

spot_img

Revenue Alerts

spot_img

News

spot_img