ನವದೆಹಲಿ;ಇಂದು ದೆಹಲಿಯಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ಶಾಕಿಂಗ್ ಸುದ್ದಿ ಸಿಕ್ಕಿದೆ. ನ.23 ರಿಂದ ಡಿ.23ರವರೆಗೆ ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಹರಿಸಲು CWRC ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ.ಒಂದು ತಿಂಗಳು ಕಾಲ ಪ್ರತಿದಿನ 2,700 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ಇನ್ನು ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು.ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ.ಇತ್ತೀಚೆಗೆ ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿತ್ತು, ಇದೀಗ ಮತ್ತೆ ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ(CWRC) ನಿರ್ದೇಶನ ನೀಡಿದೆ.

ಕರುನಾಡಿಗೆ ಶಾಕಿಂಗ್ ನ್ಯೂಸ್;ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಸೂಚನೆ
by RF Desk