21.1 C
Bengaluru
Monday, July 8, 2024

ದೇಶದಲ್ಲೇ ಮೊದಲ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಶ್ರಮಿಕ್ ನಿವಾಸ್ ಯೋಜನೆ ಅಡಿ ವಸತಿ ನಿರ್ಮಾಣ

ಬೆಂಗಳೂರು,ಮಾ.7- ಕಾರ್ಮಿಕ ಇಲಾಖೆಯ ಶ್ರಮಿಕ್ ನಿವಾಸ್ ಎಂಬ ಮಹತ್ವಾಕಾಂಕ್ಷಿ ಯೋಜನೆ ಶೀಘ್ರವೇ ಜಾರಿಯಾಗಲಿದೆ,ಕೈಗಾರಿಕಾ ಪ್ರದೇಶಗಳು ಮತ್ತು ಬೃಹತ್‌ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ‘ಶ್ರಮಿಕ್‌ ನಿವಾಸ್‌’ ಯೋಜನೆ(ಯಡಿ ಸಂಘಟಿತ ಕಾರ್ಮಿಕರಿಗೆ ವಸತಿ ನೀಡಲು ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಇಲಾಖೆ ಮುಂದಾಗಿದೆ.ಈ ಯೋಜನೆಯ ಮೊದಲ ಹಂತವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಶ್ರಮಿಕ್ ನಿವಾಸ್- ಬೃಹತ್ ವಸತಿ ಸಮುಚ್ಚಯ ಉದ್ಘಾಟನೆಗೆ ಸಜ್ಜಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ. ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ.

ವಸತಿ ಸಮುಚ್ಚಯಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೂ ಆದ್ಯತೆ ನೀಡಲಾಗಿದೆ. ಈ ವಸತಿ ಸಮುಚ್ಚಯಗಳನ್ನು ಇಲಾಖೆಯೇ ನಿರ್ವಹಿಸಲಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ 19 ಕೋಟಿ ರು. ವೆಚ್ಚದಲ್ಲಿ ಬೃಹತ್‌ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದ್ದು ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ.
ಕಾರ್ಮಿಕ ಇಲಾಖೆಯು ಕರ್ನಾಟಕವನ್ನು ಕಾರ್ಮಿಕ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಹಲವು ಶ್ರಮಿಕ ಶ್ರೇಯೋಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಈಗ ಆ ಸಾಲಿಗೆ ಈ ಶ್ರಮಿಕ್ ನಿವಾಸ್ ವಸತಿ ಯೋಜನೆ ಕೂಡ ಸೇರಲಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ. 19 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ. ಏಕ ಹಾಸಿಗೆ ವ್ಯವಸ್ಥೆಯಲ್ಲಿ 96 ಕಾರ್ಮಿಕರು ಮತ್ತು ದ್ವಿ ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರ ವಸತಿಗೆ ಅನುಕೂಲ ಲಭಿಸಲಿದೆ.

ಕಾರ್ಮಿಕ ವರ್ಗದ ಅದರಲ್ಲೂ ವಲಸೆ ಕಾರ್ಮಿಕರಿಗೆ ವಸತಿ ಬಹುದೊಡ್ಡ ಸಮಸ್ಯೆಯಾಗಿತ್ತು. ಮಲೀನ ಸ್ಥಳಗಳಲ್ಲಿ ನೆಲೆಯೂರುವ ಅನಿವಾರ್ಯತೆಯಿಂದ ಶ್ರಮಿಕ ವರ್ಗ ಮಾನಸಿಕವಾಗಿ ಹಿಂದುಳಿಯುವಂತೆ ಆಗಿತ್ತು. ಕಾರ್ಮಿಕರಿಗೆ ಮೂಲ ಸೌಕರ್ಯ ಒದಗಿಸಬೇಕೆಂಬ ಆಶಯದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನದಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶ್ರಮಿಕ ವರ್ಗಕ್ಕೆ ಮೂಲ ಸೌಕರ್ಯದ ಜೊತೆಗೆ ವಸತಿ ವ್ಯವಸ್ಥೆಗಾಗಿ ಶ್ರಮಿಕ್ ನಿವಾಸ್ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Related News

spot_img

Revenue Alerts

spot_img

News

spot_img