22.4 C
Bengaluru
Saturday, July 6, 2024

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು, ಫೆಬ್ರವರಿ 21; ಕರ್ನಾಟಕ ಸರ್ಕಾರ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. “ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ.ರಾಜ್ಯದ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬುದು ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸಮುದಾಯದ ಕನಸನ್ನು ನನಸು ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಟ್ವೀಟ್ ಮೂಲಕ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್,ಮಾಹಿತಿ ತಿಳಿಸಿದ್ದಾರೆ,

ಆದರೆ ಒಂದು ಸರಕಾರ ಅಧಿಕಾರದಲ್ಲಿ ಇರುವಾಗ ಕೆಲವೇ ಕೆಲವು ದಿನಗಳ ಹಿಂದೆ ಘೋಷಿಸಿದ ಭರವಸೆಯಾದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಇದಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳ ಬಗ್ಗೆ ಮುಂದಿನ ಬಜೆಟ್ ನಲ್ಲಿ ಅನುದಾನ ನೀಡುವ ಬಗ್ಗೆ ಬಿಲ್ಲವ ಸಮಾಜದ ನಾಯಕರನ್ನು ಒಟ್ಟುಗೂಡಿಸಿ ಕರಾವಳಿಯ ಬಹುತೇಕ ಎಲ್ಲ ಶಾಸಕರ ಮತ್ತು ಸಚಿವರಾದ ಸುನಿಲ್ ಕುಮಾರ್ ರವರ ಸಮಕ್ಷಮದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ನೀಡುವ ಭರವಸೆಯ ವಿಚಾರ ಇಂದಿನ ಬಜೆಟ್ ನಲ್ಲಿ ಪ್ರಸ್ತಾಪ ಆಗದೆ ಯಾವುದೇ ಅನುದಾನ ನೀಡದೇ ಇರುವುದು ಸರಕಾರ ಶ್ರೀ ನಾರಾಯಣ ಗುರುಗಳ ಬಗ್ಗೆ ತನಗೆ ಇರುವ ಕಾಳಜಿ ಎಂತಹುದು ಎಂಬುದನ್ನು ಸಾಬೀತು ಪಡಿಸಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಷಾಹೀನ್ ಪರ್ವೀನ್ ಕೆ. ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಟ್ವೀಟ್‌ ಮಾಡಿದ್ದರು.

ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2’ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆದೇಶ ಸಂಖ್ಯೆ ದಿನಾಂಕ 30/03/2002ರ ಜಾತಿ ಪಟ್ಟಿಯಲ್ಲಿ ಪವರ್ಗ 2’ಎ’ ರಲ್ಲಿ ಕ್ರಮಸಂಖ್ಯೆ 4(a)ಯಿಂದ (z) ವರೆಗೆ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಇಲಾಖೆಯ ಅಧೀನನ ಕಾರ್ಯದರ್ಶಿ ಷಾಹಿನ್ ಪರ್ವಿನ್ ಆದೇಶದಲ್ಲಿ ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img