ಬೆಂಗಳೂರು ಮೇ. 20 : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುತ್ತಿದ್ದು, ಈ ವೇಳೆ ಪ್ರಮಾಣವಚನ ಸಮಾರಂಭದಲ್ಲಿ 8 ಸಿಎಂಗಳು ಪಾಲ್ಗೊಳ್ಳಲಿದ್ದಾರೆ.ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ . ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ
8 ನೂತನ ಶಾಸಕರು
ಎಂ.ಬಿ ಪಾಟೀಲ್, ಲಿಂಗಾಯತ
ಡಾ.ಜಿ ಪರಮೇಶ್ವರ್, ದಲಿತ ಬಲ
ಪ್ರಿಯಾಂಕ್ ಖರ್ಗೆ, ದಲಿತ ಬಲ
ಕೆ.ಹೆಚ್ ಮುನಿಯಪ್ಪ, ದಲಿತ ಎಡ
ಕೆ.ಜೆ ಜಾರ್ಜ್, ಕ್ರಿಶ್ಚಿಯನ್
ಸತೀಶ್ ಜಾರಕಿಹೊಳಿ, ST (ವಾಲ್ಮೀಕಿ)
ಜಮೀರ್ ಅಹ್ಮದ್ ಖಾನ್, ಮುಸ್ಲಿಂ
ರಾಮಲಿಂಗಾ ರೆಡ್ಡಿ, ರೆಡ್ಡಿ ಒಕ್ಕಲಿಗ