Revenue Facts

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಅಂತಿಮ;ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್’​​​ನಿಂದ ಅಧಿಕೃತ ಘೋಷಣೆ ಬಾಕಿ ಇದೆ.ಇದೀಗ ಸ್ವಲ್ಪ ಹೊತ್ತಿನ ಮೊದಲು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ್ದು, ಅವರ ಜೊತೆ ಚರ್ಚೆ ಮಾಡಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿ ಸಿದ್ದರಾಮಯ್ಯನರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ.ಈ ಮಧ್ಯೆ ಹಿಮಾಚಲ ಪ್ರದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ದೆಹಲಿಗೆ ಆಗಮಿಸಲಿದ್ದಾರೆ. ಅಲ್ಲಿ ಸೋನಿಯಾ ಜೊತೆ ಅಂತಿಮ ಮಾತುಕತೆಯಾಗಿ ಸಿದ್ದರಾಮಯ್ಯ ಹೆಸರು ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಪ್ರಮಾಣ ವಚನ ಸಾಧ್ಯತೆ ?: ನೂತನವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಿದ ನಂತರ ನಾಳೆ ಅಪರಾಹ್ನ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಡಿಕೆಶಿಗೆ ಡಿಸಿಎಂ ಪಟ್ಟ?: ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

Exit mobile version