25.4 C
Bengaluru
Saturday, July 27, 2024

Karnataka Assembly Session:ಇಂದಿನಿಂದ 3 ದಿನ ‘ವಿಧಾನಮಂಡಲ’ದ ವಿಶೇಷ ಅಧಿವೇಶನ

ಬೆಂಗಳೂರು;ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನೂತನ ಶಾಸಕರಾಗಿ ಆಯ್ಕೆಯಾಗಿರುವಂತರ ಪ್ರಮಾಣ ವಚನ ಕಾರ್ಯಕ್ರಮ,16ನೇ ವಿಧಾನಸಭೆ ರಚನೆ ಹಾಗೂ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಉದ್ದೇಶದಿಂದ ಮೂರು ದಿನ ವಿಧಾನಸಭೆ ಅಧಿವೇಶನ ನಡೆಸಲಾಗುತ್ತಿದೆ. ಇಂದಿನಿಂದ(ಮೇ.22ರಿಂದ 24) ಆರಂಭಗೊಳ್ಳುತ್ತಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ನಡೆಯಲಿದೆ.ಮೇ 24 ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಈಗಾಗಲೇ ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲರ ಸೂಚನೆಯಂತೆ ನೂತನ ಸಚಿವರಿಗೆ ಹಂಗಾಮಿ ಸ್ಪೀಕರ್ ಪ್ರಮಾಣವಚನ ಸ್ವೀಕಾರದ ವೇಳೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಿದ್ದಾರೆ,ಸದಸ್ಯರ ಪ್ರಮಾಣವಚನ ಸ್ವೀಕಾರದ ಜೊತೆಗೆ ಸ್ಪೀಕರ್​ ಆಯ್ಕೆ ಹಿನ್ನೆಲೆಯಲ್ಲಿ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಸ್ಪೀಕರ ಸ್ಥಾನಕ್ಕೆ ಹಿರಿಯ ನಾಯಕರಾದ ಆರ್​.ವಿ ದೇಶಪಾಂಡೆ, ಹೆಚ್​.ಕೆ ಪಾಟೀಲ್​​ ಹಾಗೂ ಟಿ.ಬಿ ಜಯಚಂದ್ರ ಹೆಸರು ಕೇಳಿ ಬಂದಿದೆ.

ನಿಷೇಧಾಜ್ಞೆ ಹಿನ್ನಲೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ಪಡೆದು ಪ್ರತಿಭಟನೆ ನಡೆಸುವವರಿಗೆ ಮಾತ್ರವೇ ಅವಕಾಶವಿದೆ.ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.ಇನ್ನೂ ಇಂದು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮೇ.24ರಂದು ಸ್ಪೀಕರ್ ಆಯ್ಕೆಗಾಗಿ ಕಸರತ್ತು ನಡೆಯಲಿದೆ. ವಿಧಾನಸಭೆಯ ನೂತನ ಸ್ಪೀಕರ್ ಯಾರು ಆಗಲಿದ್ದಾರೆ ಎಂಬುದನ್ನು ಮೇ.24ರವರೆಗೆ ಕಾದು ನೋಡಬೇಕಿದೆ.ಈ ಆದೇಶದ ಅನ್ವಯ ನಿಷೇಧ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಗಳು, ದೊಣ್ಣೆಗಳು, ಕತ್ತಿ, ಈಟಿ ಮೊದಲಾದ ಮಾರಕಾಸ್ತ್ರ ಒಯ್ಯುವಂತಿಲ್ಲ. ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img