ಬೆಂಗಳೂರು;ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು(Karnataka Board of School Examination and Valuation) 2024ನೇ ಸಾಲಿನ SSLC ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ . ದ್ವಿತೀಯ PUC ಪರೀಕ್ಷೆಗಳು ಮಾ.1ರಿಂದ 22ರವರೆಗೆ ನಡೆಯಲಿವೆ. ಮಾರ್ಚ್.25ರಿಂದ ಏಪ್ರಿಲ್ 6ರವರೆಗೆ SSLC ಪರೀಕ್ಷೆ(Exam) ನಡೆಯಲಿದೆ. ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ(Register) ಮಾಡಿಕೊಂಡಿದ್ದಾರೆ. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆಯಲಿದ್ದಾರೆ. SSLC ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.ಈ ಸಂಬಂಧ ವಿಕಾಸಸೌಧದಲ್ಲಿ ಫೆ.20ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ(Madhubangarappa) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಗುರುತಿನ ಚೀಟಿ(ID card) ಕಡ್ಡಾಯಗೊಳಿಸಲಾಗಿದೆ. ನಿಯಮಾನುಸಾರ ಹಾಗು ಕೋರ್ಟ್ ಆದೇಶದ ಪ್ರಕಾರವೇ ಉಡುಪು ಧರಿಸಿಬೇಕು. 2023-24 ಸಾಲಿನಿಂದ ದ್ವಿತೀಯ PUC ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಗಣನೆ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ