20.5 C
Bengaluru
Tuesday, July 9, 2024

ರಾಜ್ಯ ಬಜೆಟ್‌ 2023-24;ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳ ಪಟ್ಟಿ

ಬೆಂಗಳೂರು ;ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಗಿದೆ.ಶುಕ್ರವಾರ ವಿಧಾನಸೌಧದಲ್ಲಿ ಬೊಮ್ಮಯಿ ಅವರು ಬಿಜೆಪಿ ಸರ್ಕಾರದ ಕೊನೆಯ ಹಾಗೂ ಬಜೆಟ್ ಮಂಡಿಸಲಿದ್ದು, ಅಂದಾಜು 3 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಗೊತ್ತಾಗಿದೆ.ವಿಧಾನಸಭೆ ಚುನಾವಣೆ ಇರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಹಲವಾರು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿದೆ.ಅದರಲ್ಲೂ ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೆಲ್ಲ ಘೋಷಣೆಯಾಗಲಿವೆ ಎಂಬ ಕುತೂಹಲ ಮೂಡಿದೆ.ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ರೈತರ ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಈ ಕುರಿತು ಕ್ರಮ ವಹಿಸುವಂತೆ ಕೋರಿದ್ದಾರೆ.

ರೈತರ ಬೇಡಿಕೆಗಳು ಈ ರೀತಿ ಇವೆ ,

*ರೈತರ ಎಲ್ಲ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಪಂಜಾಬ್ ,
ಹರಿಯಾಣ,ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ತೆರೆಯಬೇಕು ರೈತರಿಂದ ಖರೀದಿಸುವ ಖರೀದಿ ಮಿತಿಯನ್ನ ರದ್ದುಗೊಳಿಸಬೇಕು ಮೇಲಿನ ರಾಜ್ಯಗಳಲ್ಲಿ ಇರುವಂತೆ ಜಾರಿ ಮಾಡಬೇಕು.

*ರೈತರು ಬೆಳೆದ ಎಲ್ಲ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವಂಥ ವ್ಯವಸ್ಥೆ ಜಾರಿಗೆ ಬರಬೇಕು

*ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು.

*ಬೆಳೆವಿಮೆ ಪದ್ದತಿಯಲ್ಲಿ ಕೆಲವು ನೀತಿಗಳಿಗೆ ತಿದ್ದುಪಡಿ ಆಗಬೇಕು.

*ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ನಷ್ಟ ಸಿಗುವಂತಾಗಬೇಕು ಹಾಗೂ ಕೃಷಿ ಸಾಲ ನೀತಿ ಬದಲಾಗಬೇಕು.

*ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ಸಿಗುವಂತಾಗಬೇಕು.

* ರೈತರಿಗ ಬರಿ ಪಹಣಿ ಪತ್ರ ಆಧರಿಸಿ ಕನಿಷ್ಠ 3 ಲಕ್ಷ ಆಧಾರರಹಿತ ಬಡ್ಡಿಇಲ್ಲದ ಸಾಲ ಕೊಡಿಸುವ ಯೋಜನೆ ಎಲ್ಲ ಬ್ಯಾಂಕುಗಳಲ್ಲಿ ಜಾರಿಯಾಗಬೇಕು.

*ಕೃಷಿ ಉತ್ಪನ್ನಗಳಿಗೆ ಎಪಿಎಂಸಿ ಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು.

*ರೈತರ ಹಲವು ವರ್ಷಗಳ ಬೇಡಿಕೆ ಆಗಿರುವ ಕಬ್ಬಿನ ಎಫ್‌ಆಆರ್‌ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು.

*ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು.

*ಅಲ್ಲದೇ ಕಬ್ಬಿನ ಎಥನಾಲ್ ಉತ್ಪಾದನಾ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು. .
*ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್ಟಿ ತೆರಿಗೆ ರದ್ದುಗೊಳಿಸಲು, ಕೃಷಿ ಉತ್ಪನ್ನಗಳಿಗೆ ವಿಧಿಸಿರುವ ಜಿಎಸ್ಟಿ ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು.

*ಎಫ್ ಆರ್ ಪಿ ಪೂರ್ಣ ಹಣ ರೈತರಿಗೆ ಪಾವತಿ ಆಗಬೇಕು ಮತ್ತು ಕೃಷಿ ಉತ್ಪನ್ನಗಳಿಗೆ ಎಪಿಎಂಸಿ ಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು.

*ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ಕೃಷಿ ಜಮೀನು ಭೂ ಸ್ವಾಧೀನಪಡಿಸಿ ಕೊಳ್ಳುವುದನ್ನು ನಿಲ್ಲಿಸಬೇಕು,ಅವಶ್ಯಕ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ಭೂ ಸ್ವಾಧೀನ ಮಾಡಿಕೊಂಡಲ್ಲಿ ರೈತರನ್ನ ಪಾಲುದಾರರನ್ನಾಗಿ ಮಾಡಬೇಕು.

*ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ತಿಂಗಳಿಗೊಮ್ಮೆ ರೈತರ ಸಭೆ ನಡೆಸಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಈ ಬಗ್ಗೆ ಸರ್ಕಾರ ಕಠಿಣ ಸೂಚನೆ ನೀಡಬೇಕು.

ಮೇಲ್ಕಂಡ ರೈತರ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಬಜೆಟ್ ಮಂಡನೆಯಲ್ಲಿ ಕ್ರಮಕೈಗೊಳ್ಳಬೇಕು, ರೈತರ ಅಭಿವೃದ್ಧಿ ಪೂರ್ವಕವಾದ ಯೋಜನೆಗಳನ್ನು ಜಾರಿಗೆ ತರಬೇಕು, ಎಂದು ಕುರುಬೂರು ಶಾಂತಕುಮಾರ್ ರೈತರ ಕುರಿತು ಕ್ರಮ ವಹಿಸುವಂತೆ ಒತ್ತಾಯಿಸಿದ್ದಾರೆ

Related News

spot_img

Revenue Alerts

spot_img

News

spot_img