20.4 C
Bengaluru
Saturday, November 23, 2024

state budget 2023:ಮಹಿಳೆಯರಿಗೆ ಬಂಪರ್, ಗೃಹಿಣಿ ಶಕ್ತಿ ಯೋಜನೆ ಘೋಷಿಸಿದ ಸಿಎಂ

ಬೆಂಗಳೂರು, ಫೆಬ್ರವರಿ 17:ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರದ ಕೊನೆಯ ಬಜೆಟ್‌ ಆಗಿದೆ. ಕರ್ನಾಟಕ ಚುನಾವಣೆಗೆ ಇನ್ನೆರಡು ತಿಂಗಳು ಬಾಕಿ ಇದೆ,ಚುನಾವಣೆಯಲ್ಲಿ ಮತ್ತೆ ಜಯ ಸಾಧಿಸಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುವ ಬೊಮ್ಮಯಿ ಸರ್ಕಾರ ಈ ಬಾರಿ ಜನಪರ ಬಜೆಟ್‌ ಮಂಡಿಸುವ ಆತುರದಲ್ಲಿದ್ದಾರೆ,ಸಾಮಾನ್ಯ ಜನರ ನಿರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಕರ್ನಾಟಕ ಬಜೆಟ್‌ ಮಂಡಿಸಿದ್ದಾರೆ,

ರಾಜ್ಯದ ವಿವಿಧ ಜಾತಿಗಳು,ನಗರವಾಸಿಗಳು ತಳ ಸಮುದಾಯಗಳು,ರೈತರು, ಸರ್ಕಾರಿ ನೌಕರರು,ಎಸಿ/ಎಸ್‌ಟಿ ಸಮುದಾಯಗಳು,ಕಾರ್ಮಿಕರನ್ನುದೃಷ್ಟಿಯಲ್ಲಿಟ್ಟುಕೊಂಡು ಬಜೆಟ್‌ ತಯಾರಿಸಲಾಗಿದೆ ಎಂದು  ತಿಳಿದುಬಂದಿದೆ.ಚುನಾವಣಾ ಹೊಸ್ತಿಲಲ್ಲಿ ಮಹಿಳಾ ಸಬಲೀಕರಣ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಆಕರ್ಷಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರೈತರಿಗೆ ₹ 3 ಲಕ್ಷ ರೂಪಾಯಿ ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಇದನ್ನು ₹ 5 ಲಕ್ಷಕ್ಕೆ ಏರಿಸುವ ಸಾಧ್ಯತೆ ಎಂದು ತಿಳಿದುಬಂದಿದೆ.ಬಜೆಟ್​ನಲ್ಲಿ ನಿರೀಕ್ಷೆಯಂತೆ ಸ್ತ್ರೀ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ.ಬಜೆಟ್‌ನಲ್ಲಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿ ಶಕ್ತಿ ಮೂಲಕ ಮಹಿಳೆಯರಿಗೆ ಸಹಾಯಧನವನ್ನು ಘೋಷಣೆ ಮಾಡಿದ್ದಾರೆ.

*30 ಲಕ್ಷ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌, 1 ಲಕ್ಷ ಮಹಿಳೆಯರಿಗೆ ಕೌಶಲ್ಯ ತರಬೇತಿ, ಸ್ತ್ರೀ ಸಬಲೀಕರಣ,

*ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 500 ರೂ, ಸಹಾಯಧನ,

*ವಿವಾಹಿತರಿಗೆ ಆರೋಗ್ಯ ಪುಷ್ಟಿ ಯೋಜನೆ ಘೋಷಣೆ ಮಾಡಲಾಗಿದೆ.

*ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet’ ಗಳನ್ನು ನಿರ್ಮಿಸಲಾಗುವುದು.

* ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ಶೈಲಿಯಲ್ಲಿ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು.

*ಆಶಾ ಕಾರ್ಯಕರ್ತೆ,ಅಂಗನವಾಡಿ, ಸಹಾಯಧನ 1000 ರೂ. ನಿಂದ 1500 ರೂ.ಗೆ ಏರಿಕೆ ಮಾಡುವುದಾಗಿ ತಿಳಿಸಿದ್ದಾರೆ.

*ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ.

*ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪನೆಯ ಘೋಷಣೆ ಮಾಡಲಾಗಿದೆ.

*ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ಸಹಾಯ ಧನ ವಿತರಣೆ

Related News

spot_img

Revenue Alerts

spot_img

News

spot_img