Karnataka Budget 2023:2ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ.ಬಿಬಿಎಂಪಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜಧಾನಿ ಬೆಂಗಳೂರಿಗೆ 2023-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಿದ್ದಾರೆ.ಅಲ್ಲದೇ ಬೆಂಗಳೂರು ಟ್ರಾಫಿಕ್ ಸಮಸ್ಯೆ (Bengaluru Traffic ಪರಿಹಾರಕ್ಕೆ 150 ಕೋಟಿ ಅನುದಾನವನ್ನು ಅವರು ಘೋಷಿಸಿದ್ದಾರೆ. ಚುನಾವಣಾ ಪೂರ್ವದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಕೊಟ್ಟಿರುವ ಕೊಡುಗೆಗಳು ಏನು?
ಬೆಂಗಳೂರು ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿ,
ತ್ಯಾಜ್ಯ ನಿರ್ವಹಣೆ ವ್ಯವಸ್ಥೆ,ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ಸರ್ಕಾರ ಆದ್ಯತೆ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ನೀಡಿರುವ ಕೊಡುಗೆಗಳ ಪಟ್ಟಿ ಹೀಗಿದೆ,
* ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ. ವೆಚ್ಚದ ಕಾಮಗಾರಿಗಳು ಅನುಷ್ಠಾನ, ಹೈ ಡೆನ್ಸಿಟಿ ಕಾರಿಡಾರ್ ಯೋಜನೆಯಡಿಯಲ್ಲಿ 273 ಕೋಟಿ ರೂ. ವೆಚ್ಚದಲ್ಲಿ 108 ಕಿ.ಮೀ. ರಸ್ತೆ ಅಭಿವೃದ್ಧಿ
*ಬೆಂಗಳೂರಿನಲ್ಲಿ 243 ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್ಗಳನ್ನು ಅನುಮೋದಿಸಲಾಗಿದೆ. ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ.ಗಳ ಯೋಜನೆ ರೂಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
* ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ
*1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
* ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು ₹ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.
*ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
*ಬೆಂಗಳೂರು ನಗರದಲ್ಲಿ 1850 ಎಂಎಲ್ಡಿ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು ಇದರಲ್ಲಿ 1500 ಎಂಎಲ್ಡಿ ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ.
* ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ ₹ 300 ಕೋಟಿ ಒದಗಿಸಲಾಗುವುದು.
*ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಗಳನ್ನು 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜೈಕಾ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ತೆಗೆದುಕೊಂಡಿದ್ದು, ಎಲ್ಲಾ ಕಾಮಗಾರಿಗಳು 2023-245 ಸಾಲಿನಲ್ಲಿ ಪೂರ್ಣ ಗೊಳಿಸಲಾಗುವುದು. 775 ಎಂ.ಎಲ್.ಡಿ ಸಾಮರ್ಥ್ಯ ಹೊಂದಿರುವ ಈ ಯೋಜನೆಯನ್ನು ಪೂರ್ಣಗೊಳಿಸುವುದರಿಂದ ನಗರದ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನೆರವಾಗಲಿದೆ.
*ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್‌ಗಳ ಅಳವಡಿಕೆ ಮತ್ತು GPS ತಂತ್ರಾಂಶದ ಮುಖಾಂತರ ಕಣ್ಣಾವಲು ಕ್ರಮ.
*ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet ಗಳನ್ನು ನಿರ್ಮಿಸಲಾಗುವುದು.
*ನಿಮ್ಹಾನ್ಸ್ ಆವರಣದಲ್ಲಿ 146 ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ಮೊದಲ ಅಂಗಾಂಗ ಜೋಡಣೆಗೆ ಮೀಸಲಾದ ಸರ್ಕಾರಿ ಆಸ್ಪತ್ರೆ ಸ್ಥಾಪನೆ ಘೋಷಣೆ.
* ಹವಾಮಾನ ಬದಲಾವಣೆಯ ಪರಿಣಾಮವನ್ನು ಕಡಿಮೆ ಮಾಡಲು, ಬೆಂಗಳೂರಿನಲ್ಲಿ ಪ್ರವಾಹವನ್ನು ನಿಯಂತ್ರಿಸಲು ವಿಶ್ವಬ್ಯಾಂಕ್ ನೆರವಿನೊಂದಿಗೆ 3,000 ಕೋಟಿ ರೂ. ಗಳ ಯೋಜನೆ ಅನುಷ್ಠಾನ
*ಬೆಂಗಳೂರಿನಲ್ಲಿ ದಿ ಸೇಫ್ ಸಿಟಿ ಪ್ರಾಜೆಕ್ಟ್ ಕಾರ್ಯಗತಗೊಳಿಸಲಾಗುತ್ತಿದ್ದು, ಈ ಯೋಜನೆಯಡಿಯಲ್ಲಿ 1,640 ಸ್ಥಳಗಳಲ್ಲಿ 4,100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗುತ್ತಿದ್ದು, ಈ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸುವ ಸಲುವಾಗಿ 261 ಕೋಟಿ ರೂ. ಅನುದಾನ
* ಮೆಗಾಸಿಟಿ ರಿವಾಲ್ವಿಂಗ್ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಗಳನ್ನು ₹ 1,200 ಕೋಟಿ ಮೊತ್ತದಲ್ಲಿ ಕೈಗೊಳ್ಳಲಾಗಿದೆ.
*3.ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಅಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ ರಸ್ತೆಯವರೆಗೆ ಇಂಟಿಗ್ರೇಟೆಡ್ ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುತ್ತದೆ.