ಬೆಂಗಳೂರು, ಫೆ. 17 : ರಾಜ್ಯ ಬಜೆಟ್ ನಲ್ಲಿ ಬಿಜೆಪಿ ನೇತೃತ್ವದ ಸಿಎಂ ಬೊಮ್ಮಾಯಿ ಅವರ ಸರ್ಕಾ ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ 37,960 ಕೋಟಿ ಮೀಸಲಿಟ್ಟಿದೆ. ಸಿಎಂ ಬೊಮ್ಮಾಯಿ ಅವರು ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಕೊಡುಗೆಗಳನ್ನು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಕೊರತೆ ಉಂಟಾಗದಂತೆ ಗಮನ ಹರಿಸಿದೆ. ಶಾಲೆಗಳ ಅಭಿವೃದ್ಧಿ, ವಿವಿ ಸ್ಥಾಪನೆ, ಅಭ್ಯುದಯ ಕಾರ್ಯಕ್ರ ಅನುಷ್ಠಾನ, ಹಾಸ್ಟೆಲ್ ಗಳ ನಿರ್ಮಾಣಗಳಿಗೆ ಅನುದಾನ ನೀಡು ವುದಾಗಿ ಹೇಳಲಾಗಿದೆ. ವಿದ್ಯಾರ್ಥಿಗಳಿಗಾಗಿ ವಿದ್ಯಾಶಕ್ತಿ ಯೋಜನೆಯನ್ನು ಸರ್ಕಾರ ಹೊಸದಾಗಿ ಘೋಷಣೆ ಮಾಡಿದೆ.
ಶಾಲೆಗಳ ಅಭಿವೃದ್ಧಿ: ಕಾರ್ಯ ನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿ ಹಾಗೂ ಹೊಸದಾಗಿ ನಿರ್ಮಿಸಲಿರುವ ಶಾಲೆಗಳಿಗೆ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಇದರೊಂದಿಗೆ ಕಾಲೇಜುಗಳ ಅಭಿವೃದ್ಧಿಯನ್ನು ಮಾಡಲಾಗುವುದು.
ವಿದ್ಯಾನಿಧಿ, ವಿದ್ಯಾಶಕ್ತಿ ಯೋಜನೆ: ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ `ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರ ಅಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ.
ವಿಶೇಷ ಹಾಸ್ಟೆಲ್: ರಾಜ್ಯದ ಕೆಲವೆಡೆ ವಿದ್ಯಾರ್ಥಿಗಳಿಗೆ ವಿಶೇಷ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಹೇಳಲಾಗಿದೆ. ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್ ಅನ್ನು ನಿರ್ಮಾಣ ಮಾಡಲಾಗುತ್ತದೆ. ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸಿಗುತ್ತದೆ ಎಂದು ಹೇಳಲಾಗುತ್ತದೆ.
‘ಹಳ್ಳಿ ಮುತ್ತು’ ಯೋಜನೆ: ಹಳ್ಳಿ ಮುತ್ತು ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.
ವೃತ್ತಿಪರ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ, ಸಿ.ಎನ್.ಆರ್. ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು. ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹಧನ ನೀಡಲಾಗುವುದು.
ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್ ಕಾರ್ನ್ರಲಗಳನ್ನು ಸ್ಥಾಪಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ ‘ಅಭ್ಯುದಯ’ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು.
ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ – ಮತ್ತು ಹಾಸನ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ 7 ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಗೆ ಒತ್ತು ನೀಡಲಾಗುವುದು.