ಬೆಂಗಳೂರು ಜು . 18: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ.ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಮೂಲಕ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
1) ಕೆಇಎ ಕಾರ್ಯನಿರ್ವಾಹಕ ನಿರ್ದೇಶಿಕಿಯಾಗಿದ್ದ ಐಎಎಸ್ ಅಧಿಕಾರಿ ರಮ್ಯಾ.ಎಸ್ ಅವರನ್ನು ಬಿಎಂಆರ್ ಡಿ ಕಮೀಷನರ್ ಆಗಿ ವರ್ಗಾವಣೆ ಮಾಡಿ ಆದೇಶಿಸಿದೆ.
2) ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓ ಆಗಿದ್ದ ಎಂ.ಎಸ್ ದಿವಾಕರ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ.
3) ಗದಗ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ.ಸುಶೀಲಾ.ಬಿ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
4) ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಧಿಕಾರಿ ವೆಂಕಟೇಶ್.ಟಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಈ ಮೂಲಕ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.