20.5 C
Bengaluru
Tuesday, July 9, 2024

ಸರ್ಕಾರಿ ನೌಕರರಿಗೆ ಹೊಸ ಸೌಲಭ್ಯ ಕಲ್ಪಿಸಲಿರುವ ರಾಜ್ಯ ಸರ್ಕಾರ: ದಿನಸಿ ಸೇರಿದಂತೆ ಹಲವು ಉತ್ಪನ್ನಗಳು ಕಡಿಮೆ ಬೆಲೆಯಲ್ಲಿ ಲಭ್ಯ

ಬೆಂಗಳೂರು, ಫೆ. 01 : ರಾಜ್ಯ ಸರ್ಕಾರಿ ನೌಕರರಿಗೆ ಇದು ಪಕ್ಕಾ ಗುಡ್‌ ನ್ಯೂಸ್‌. ಈಗಾಗಲೇ ನಿಮಗೆಲ್ಲರಿಗೂ ಮಿಲಿಟರಿ ಕ್ಯಾಂಟೀನ್‌ ಬಗ್ಗೆ ತಿಳಿದಿರುತ್ತದೆ. ಮಿಲಿಟರಿಯಲ್ಲಿ ಕೆಲಸ ಮಾಡುತ್ತಿರುವವರಿಗಾಗಿ , ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಇತರ ವಸ್ತುಗಳು ಸೇರಿದಂತೆ ದೈನಂದಿನ ಬಳಕೆಗೆ ಗುಣಮಟ್ಟದ ಉತ್ಪನ್ನಗಳು ಲಭ್ಯವಿರುವ ಮಾರ್ಟ್‌ ಅನ್ನು ತೆರೆಯಲಾಗಿತ್ತು. ಇದರಲ್ಲಿ ಸೈನಿಕರು, ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ಈ ಮಾರ್ಟ್‌ ಗಳಲ್ಲಿ ಕಡಿಮೆ ಬೆಲೆಗೆ ಉತ್ತಮವಾದ ಉತ್ಪನ್ನಗಳನ್ನು ಖರೀದಿಸಬಹುದು. ಇಂತಹದ್ದೇ ಮಾದರಿಯ ಮಾರ್ಟ್‌ ಅನ್ನು ರಾಜ್ಯದ ಸರ್ಕಾರಿ ನೌಕರರಿಗೆ ತೆರೆಯಲು ಈಗ ಸರ್ಕಾರ ಪ್ಲಾನ್‌ ಮಾಡಿಕೊಂಡಿದೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾಂಟೀನ್‌ ನಲ್ಲಿ ಶೇಕಡಾ 10 ರಿಂದ 60 ರಷ್ಟು ರಿಯಾಯಿತಿಯಲ್ಲಿ ಅಗತ್ಯ ಸರಕುಗಳು ಮತ್ತು ದಿನಸಿಗಳನ್ನು ಖರೀದಿಸಬಹುದು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತ್ಯೇಕವಾಗಿ ಸ್ಥಾಪಿಸಲಾದ ಫ್ಯಾಮಿಲಿ ಕ್ಯಾಮಟೀನ್‌ ಅನ್ನು ಸರ್ಕಾರ ಶೀಘ್ರದಲ್ಲೇ ತೆರೆಯುತ್ತದೆ. ಈ ಕ್ಯಾಂಟೀನ್‌ ಗಳಲ್ಲಿ ದಿನಸಿ, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಇತರ ವಸ್ತುಗಳು ಸೇರಿದಂತೆ ದೈನಂದಿನ ಬಳಕೆಗೆ ಗುಣಮಟ್ಟದ ಉತ್ಪನ್ನಗಳು ಮಾರ್ಟ್‌ನಲ್ಲಿ ಭಾರಿ ರಿಯಾಯಿತಿ ದರದಲ್ಲಿ ಲಭ್ಯವಿರುತ್ತವೆ. ಸರ್ಕಾರಿ ಜಾಗದಲ್ಲಿ ಈ ಕ್ಯಾಂಟೀನ್‌ ಗಳನ್ನು ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ.

ಆದರೆ ಈ ಕ್ಯಾಂಟೀನ್‌ ಗಳ ನಿರ್ವಹಣೆಯನ್ನು ಖಾಸಗಿ ಏಜೆನ್ಸಿ ನಡೆಸಲಿದೆ. ಉತ್ಪನ್ನಗಳು ಸಿಬ್ಬಂದಿಗೆ ಕೈಗೆಟುಕುವ ದರದಲ್ಲಿ ಲಭ್ಯವಿರುತ್ತವೆ. ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳು ವಸ್ತುಗಳನ್ನು ಖರೀದಿಸಲು ಬರುವುದರಿಂದ, ಅವುಗಳನ್ನು ನಡೆಸುವ ಏಜೆನ್ಸಿಗೆ ಇದು ಆರ್ಥಿಕವಾಗಿ ಕೆಲಸ ಮಾಡುತ್ತದೆ. ಕ್ಯಾಂಟೀನ್‌ ಗಳನ್ನು ಸ್ಥಾಪಿಸಲು ಪ್ರತಿ ಜಿಲ್ಲೆಯಲ್ಲೂ ಭೂಮಿಯನ್ನು ಸರ್ಕಾರ ಪಡೆಯಲಿದೆ. ಪ್ರಸ್ತುತ, ರಾಜ್ಯ ಸರ್ಕಾರವು ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ 72 ಇಲಾಖೆಗಳಲ್ಲಿ 5.2 ಲಕ್ಷ ಉದ್ಯೋಗಿಗಳನ್ನು ಹೊಂದಿದೆ. ಮಾಜಿ ಉದ್ಯೋಗಿಗಳು ಮತ್ತು ಅವರ ಸಂಗಾತಿಗಳು ಸಹ ಮಾರ್ಟ್ ಅನ್ನು ಬಳಸಿಕೊಳ್ಳಬಹುದು.

ಬೆಂಗಳೂರಿನಲ್ಲಿ ಒಟ್ಟು ನಾಲ್ಕು ಕ್ಯಾಂಟೀನ್‌ ಗಳನ್ನು ತೆರೆಯಲಾಗುತ್ತದೆ. ಆದರೆ ಮುಖ್ಯ ವಿಷಯವೆಂದರೆ ಭೂಮಿಯ ಲಭ್ಯತೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಬೆಂಗಳುರಿನ ನಾಲ್ಕೂ ದಿಕ್ಕಿನಲ್ಲಿ ಕ್ಯಾಂಟೀನ್‌ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದು ಸಿಬ್ಬಂದಿಗೆ ಹತ್ತಿರದ ಮಾರ್ಟ್‌ನಿಂದ ಖರೀದಿಸಲು ಅನುಕೂಲಕರವಾಗಿದೆ. ಈ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಶಿವಮೊಗ್ಗದಲ್ಲಿ ಮೊದಲ ಕ್ಯಾಮಟೀನ್‌ ಅನ್ನು ತೆರೆಯಲಾಗುತ್ತದೆ. ಫೆಬ್ರವರಿ 4 ರಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕ್ಯಾಂಟೀನ್‌ ಅನ್ನು ಉದ್ಘಾಟಿಸಲಾಗುವುದು ಎಂದು ಅವರು ಹೇಳಿದರು. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ಕ್ಯಾಂಟೀನ್‌ ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

Related News

spot_img

Revenue Alerts

spot_img

News

spot_img