ಬೆಂಗಳೂರು;ರಾಜ್ಯ ಕಾಂಗ್ರೆಸ್(congress) ಸರ್ಕಾರದ ವೈಫಲ್ಯ ವಿರುದ್ಧ ನಾಳೆ (ಸೆಪ್ಟೆಂಬರ್ 8) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿದೆ.ಕಮಲ ಪಕ್ಷ ಇಂದು ಬೆಂಗಳೂರು ಸಹಿತ ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. DGPಗೆ ಈಗಾಗಲೇ ದೂರು ನೀಡಿರುವ BJP ನಾಯಕರು ಇದೀಗ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಮಾಜಿ CM BSY ಪ್ರತಿಭಟನೆಯ ನೇತೃತ್ವ ವಹಿಸಿರುವುದು BJPಯಲ್ಲಿ ಸಂಚಲನ ಮೂಡಿಸಿದೆ.ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ.ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಸುಮಾರು 15 ಸಾವಿರ ಜನರನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ.ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರ, ಹಿಂದೆ ಮಾಡಿರುವ ಕೆಲಸಗಳಿಗೆ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಇವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆಕೊಟ್ಟಿದೆ. ನಾಳೆ ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಬೆಂಗಳೂರಿನ ಎಲ್ಲ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.