ಬೆಂಗಳೂರು;ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನಮ್ಮದು ಹಿಂದೂ ವಿರೋಧಿ ಸರ್ಕಾರ ಎಂಬುದನ್ನು ಪದೇಪದೆ ಸಾಬೀತು ಮಾಡುತ್ತಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY,vijendra)ಆರೋಪಿಸಿದ್ದಾರೆ. 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ(Babri Masjid Demolition Case) ವ್ಯಕ್ತಿಯೋರ್ವನನ್ನು ಬಂಧಿಸಿರುವ ಕುರಿತು ಮಾತನಾಡಿ, ಸರ್ಕಾರ 31 ವರ್ಷದ ಹಳೆ ಪ್ರಕರಣವನ್ನು ರೀಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದೆ. ಇದನ್ನು ನಾವು ಮುಕ್ತ ಕಂಠದಿಂದ ಖಂಡಿಸುತ್ತೇವೆ ಎಂದಿದ್ದಾರೆ.ಅಸೆಂಬ್ಲಿ ಚುನಾವಣೆಯ ಬೆನ್ನಲ್ಲೇ ಬಿಜೆಪಿ(BJP) ಮುಂದಿನ ಲೋಕಸಭೆ ಚುನಾವಣೆಯತ್ತ ಗಮನ ಹರಿಸಿದೆ. ಇತ್ತೀಚೆಗೆ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಸಜ್ಜಾಗುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದ್ದರು. 2024ರ ಚುನಾವಣೆಯಲ್ಲಿ ಪಕ್ಷವು 35 ಕೋಟಿ ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ.ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್(Congress) ಸರಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವವನ್ನು ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು.