Revenue Facts

ಅಕ್ರಮ ಬ್ಯಾನರ್‌ಗಳ ವಿರುದ್ಧ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ

ಅಕ್ರಮ ಬ್ಯಾನರ್‌ಗಳ ವಿರುದ್ಧ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು, ಮಾ. 25: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಸದ್ಯದಲ್ಲೇ ಜಾರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಬ್ಯಾನರ್, ಪೋಸ್ಟರ್, ಸಾರ್ವಜನಿಕರಿಗೆ ಅಡ್ಡಿಪಡಿಸುವ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಬಿಬಿಎಂಪಿ ಕಾಯ್ದೆ 2020 ಅನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳಾಗಿರುವ ವಲಯ ಆಯುಕ್ತರಿಗೆ ತಿಳಿಸಲಾಗಿದೆ.

ಇದಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಮತ್ತು ಸಾರ್ವಜನಿಕ ತೊಂದರೆಗಳ ವಿರುದ್ಧ ಬಿಬಿಎಂಪಿ ಕಾಯ್ದೆಯ ಸೆಕ್ಷನ್ 254 ರ ಅಡಿಯಲ್ಲಿ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಬಂಟಿಂಗ್‌ಗಳನ್ನು ತೆರವು ಮಾಡುವುದು. ಕಾನೂನು ಉಲ್ಲಂಘಿಸುವವರ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಅಕ್ರಮ ಬ್ಯಾನರ್‌ಗಳು ಮತ್ತು ಸಾರ್ವಜನಿಕ ತೊಂದರೆಗಳ ನಿಷೇಧಕ್ಕೆ ಸಂಬಂಧಿಸಿದಂತೆ, ಇದನ್ನು ಈಗಾಗಲೇ ಪುರಸಭೆಯ ನಿಯಮಗಳ ಅಡಿಯಲ್ಲಿ ಪರಿಹರಿಸಲಾಗಿದೆ. ನೀತಿ ಸಂಹಿತೆ ಜಾರಿಗೆ ಬಂದ ನಂತರ, ಅದೇ ನಿಯಮಗಳು ಅನ್ವಯಿಸುತ್ತವೆ. ನಿಯಮಗಳನ್ನು ಜಾರಿಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ಥ ಕ್ರಮ ಕೈಗೊಳ್ಳಲಾಗುತ್ತದೆ. 1951ರ ಭಾರತೀಯ ದಂಡ ಸಂಹಿತೆ, 1860 ಕಾಯಿದೆ ಸಂಬಂಧಿತ ಕಾನೂನುಗಳ ನಿಬಂಧನೆಗಳ ಅಡಿಯಲ್ಲಿ ಕ್ರಮಕ್ಕೆ ಅಧಿಕಾಗುಳು ಜವಾಬ್ದಾರರಾಗಿರುತ್ತೀರಿ ಎಂದು ಹೇಳಿದ್ದಾರೆ.

ನೀತಿ ಸಂಹಿತೆ ಯಾವುದೇ ಸಮಯದಲ್ಲಿ ಜಾರಿಗೆ ಬಂದರೆ, ಈ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅದರಲ್ಲಿ ವಿಫಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗಿರಿನಾಥ್ ಅವರು ಖಡಕ್‌ ಆಗಿದೆ ಹೇಳಿದ್ದಾರೆ.

Exit mobile version