21.4 C
Bengaluru
Saturday, July 27, 2024

ಸರ್ಕಾರಿ ಪ್ರಾಥಮಿಕ & ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ..!

ಕರ್ನಾಟಕದಲ್ಲಿ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ಮಾಡಲು ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತಿಲ್ಲ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ(government primary and secondary schools) ಗಳಲ್ಲಿ ಶೌಚಾಲಯಗಳ ಸ್ವಚ್ಛತೆಗೆ(toilets clean ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬಾರದು . ಇತ್ತೀಚೆಗೆ ಶೌಚಾಲಯಗಳ ಸ್ವಚ್ಛತೆಗೆ ವಿದ್ಯಾರ್ಥಿಗಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು..

ಸರ್ಕಾರಿ ಶಾಲೆಯಲ್ಲಿ ಸಹ ಪಠ್ಯ ಚಟುವಟಿಕೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳಲ್ಲಿ, ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ಈ ಎಲ್ಲಾ ಹೊಣೆಗಾರಿಕೆಯನ್ನು ಮುಖ್ಯ ಶಿಕ್ಷಕರು, ಶಿಕ್ಷಕರ ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ.ಆಕಸ್ಮಿಕವಾಗಿಯೂ ಸಹ ಶಿಕ್ಷಕರು ಶೌಚಾಲಯಗಳ ಸ್ವಚ್ಛತೆಗೆ ಮಾಡಿಸಬಾರದು. ಇದು ಆಕ್ಷೇಪಣೀಯ ಮತ್ತು ಖಂಡನೀಯ. ಈ ರೀತಿ ಮಾಡಿದ್ದಲ್ಲಿ ಶಿಕ್ಷಕರ ಮೇಲೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ.

* ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛಾಲಯಗಳನ್ನು ಯಾವುದೇ ಕಾರಣಕ್ಕು ಸ್ವಚ್ಛಾ ಮಾಡಿಸಬಾರದು.
* ಸುತ್ತೋಲೆಯ ಅನುಸಾರ ಶಾಲಾ ನಿರ್ವಹಣಾ ಅನುದಾನವನ್ನು ಆಯಾ ಸರ್ಕಾರಿ ಶಾಲೆಗಳಿಗೆ ಪ್ರಸ್ತುತ ಸಾಲಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ.
* ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸತಕ್ಕದ್ದು.
* ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಗಾಗಿ ಬಳಸಿಕೊಂಡಲ್ಲಿ ಅಂತಹವರ ಮೇಲೆ ಇಲಾಖಾ ವತಿಯಿಂದ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು.

ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಂಬಂಧಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೆ ರಾಜ್ಯ ಸರ್ಕಾರ ಉಲ್ಲೇಖಿಸಿದೆ.

Related News

spot_img

Revenue Alerts

spot_img

News

spot_img