Revenue Facts

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಸಬ್‌ ಇನ್‌ಸ್ಪೆಕ್ಟರ್,ಹೆಡ್‌ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಸಬ್‌ ಇನ್‌ಸ್ಪೆಕ್ಟರ್,ಹೆಡ್‌ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ತುಮಕೂರು;ಅಪಘಾತದ ಸಮಯದಲ್ಲಿ ವಶಕ್ಕೆ ಪಡೆದಿದ್ದ ಕಾರು ಬಿಡುಗಡೆಗೆ ಲಂಚ ಪಡೆಯುತ್ತಿದ್ದ ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗುರುಮಲ್ಲುರಾಧ್ಯ, ಹೆಡ್‌ಕಾನ್‌ಸ್ಟೆಬಲ್ ಎ.ನಾಗರಾಜು ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ಏ.28ರಂದು ಸಂಭವಿಸಿದ್ದ ಅಪಘಾತ ಪ್ರಕರಣದ ವಾಹನ ಬಿಡುಗಡೆ ಮಾಡಲು ಲಂಚಕ್ಕೆ ಆಗ್ರಹಿಸಿ ಅದರಂತೆ ಜಿಲ್ಲಾಸ್ಪತ್ರೆಯ ಶವಾಗಾರದ ಬಳಿ ವ್ಯಕ್ತಿಯೊಬ್ಬರಿಂದ ಮೇ.5ರಂದು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಎಎಸ್ಐ ಗುರುಮಲ್ಲರಾಧ್ಯ 10 ಸಾವಿರ ರು, ಹೆಡ್ ಕಾನ್ ಸ್ಟೇಬಲ್ ನಾಗರಾಜು 500 ರು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಂಜುನಾಥ್, ಹರೀಶ್‌, ಇನ್‌ಸ್ಪೆಕ್ಟರ್‌ಗಳಾದ ಸತ್ಯನಾರಾಯಣ, ರಾಮರೆಡ್ಡಿ, ಶಿವರುದ್ರಪ್ಪ ಮೇಟಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.

Exit mobile version