25 C
Bengaluru
Monday, December 23, 2024

ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್‌ ಒಳಗೆ ಸಲ್ಲಿಕೆ

ಬೆಂಗಳೂರು;ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿ ಕೊಡುತ್ತಾರೆ, ನಾವು ಸ್ವೀಕರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ’ ಪುನರುಚ್ಚರಿಸಿದ್ದಾರೆ. ಅವರು ಕಾಳಿದಾಸ ಹೆಲ್ತ್ ಆ್ಯಂಡ್ ಎಜು ಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಪ್ರೇರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿಗಣತಿ ವರದಿಯನ್ನು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಕೊಡುವುದಾಗಿ ಹೇಳಿದ್ದಾರೆ. ನಾವು ಸ್ವೀಕರಿಸುತ್ತೇವೆ ಎಂದರು.ಜಾತಿ ಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದು, ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ.ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು. ಶಾಸಕರು 30 ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿ, ಎಲ್ಲಾ ಶಾಸಕರು ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Related News

spot_img

Revenue Alerts

spot_img

News

spot_img