ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೊಂದೇ ಜನಪರ ಯೋಜನೆಗಳಿಂದ ಮನೆಮಾತಾಗುತ್ತಿದೆ. ಅದರಲ್ಲಿ ಪ್ರಮುಖವಾಗಿ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ,ಅನ್ನಭಾಗ್ಯ ಯೋಜನೆ, ಯುವ ನಿಧಿ ಯೋಜನೆಗಳಾಗಿದ್ದರೆ, ಇದೀಗ ಅಂತಹದೇ ಹೊಸದೊಂದು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದ್ಯಾವುದೆಂದರೆ ನೋಂದಾಹಿತ ಕಟ್ಟಡ ಕಾರ್ಮಿಕರ ಮದುವೆ ಗೆ ಸಹಾಯಧನ ನೀಡುವ ಹೊಸ ಯೋಜನೆ ಶುರುವಾಗಿದೆ.
ಏನಿದು ನೋಂದಾಯಿತ ಕಟ್ಟಡ ಕಾರ್ಮಿಕರ ಮದುವೆ ಗೆ ಸಹಾಯಧನ ಯೋಜನೆ? ಇದರಲ್ಲಿರುವ ಮಾನದಂಡಗಳೇನು?:
ಕರ್ನಾಟಕ ಸರ್ಕಾರದ ಕಾರ್ಮಿಕರ ಇಲಾಖೆ ಯ ಅಧೀನಕ್ಕೆ ಬರುವ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯ ಉತ್ತೇಜಿಸುವ ಸಲುವಾಗಿ ಈ ಯೋಜನೆಯನ್ನು ತರಲಾಗಿದೆ.
1.ನೋಂದಾಯಿತ ಕಟ್ಟಡ ಕಾರ್ಮಿಕರ ಮದುವೆ ಅಥವಾ ಅವರ ಮೊದಲ ಎರಡು ಮಕ್ಕಳ ಮದುವೆಗೆ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಸಹಾಯಧನ ನೀಡುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
1.ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಟ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
2.ಒಂದು ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಬಹುದು.
3.ವಧು ವರರು ಇಬ್ಬರಿಗೂ ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.
4.ಮದುವೆಯ ದಿನದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಿರಬೇಕು.