25 C
Bengaluru
Monday, December 23, 2024

ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು ಏ18;ನಕಲಿ ದಾಖಲೆ ಸೃಷ್ಟಿಸಿ ಕೋಟಿಗಟ್ಟಲೆ ಬಿಲ್ ಮಂಜೂರು ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ,ಕಾಮಗಾರಿಯೊಂದಕ್ಕೆ ಮಂಜೂರಾಗಿದ್ದ ₹ 55 ಕೋಟಿಯನ್ನು ಸಂಸ್ಥೆಯ ಅಧ್ಯಕ್ಷ ಡಿ.ಎಸ್. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು..ಮೂಲಗಳ ಪ್ರಕಾರ ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ 55 ಕೋಟಿ ರೂ ಬಿಲ್ ಪಾವತಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ‌ ಲೋಕಾಯುಕ್ತ ಪೊಲೀಸರು, ತೀವ್ರ ಶೋಧ ನಡೆಸುತ್ತಿದ್ದಾರೆ.ಈ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದರು. ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿರುವುದು ಕಂಡುಬಂದಿರುವ ಕಾರಣದಿಂದ ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ.ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.

Related News

spot_img

Revenue Alerts

spot_img

News

spot_img