#Suggestion for ‘One Country #One Election # invited # the public
ದೆಹಲಿ: ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ(NDA) ಸರಕಾರದ ಮಹತ್ವಾಕಾಂಕ್ಷಿ ಕ್ರಮವಾದ ಒಂದು ದೇಶ, ಒಂದು ಚುನಾವಣೆ(One country, one election)’ ಬಗ್ಗೆ ಅಧ್ಯಯನ ನಡೆಸಿ ಸಲಹೆ-ಶಿಫಾರಸು ನೀಡಲೆಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ram Nath Kovind) ಅವರ ನೇತೃತ್ವದಲ್ಲಿ ರಚಿಸಲಾಗಿ ರುವ ಸಮಿತಿ ‘ಒಂದೇ ಚುನಾವಣೆ’ ವಿಚಾರವಾಗಿ ಸಾರ್ವಜನಿಕರ ಅಭಿಪ್ರಾಯ-ಸಲಹೆ ಗಳನ್ನು ಕೇಳಿದೆ. ದೇಶದಲ್ಲಿ ಲೋಕಸಭೆ, ವಿಧಾನ ಸಭೆ ಮತ್ತು ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಕಾನೂನು ಗಳಲ್ಲಿ ಬದಲಾವಣೆ ತರಬೇಕಾದ ಅಗತ್ಯವಿದೆ. ಈ ಬಗ್ಗೆ ನಾಗರಿಕರು ತಮ್ಮ ಅಭಿಪ್ರಾಯ-ಸಲಹೆಗಳನ್ನು ನೀಡಬೇಕು. ದೇಶ ಒಂದು ಚುನಾವಣೆ ಸಂಬಂಧ ನೇಮಕವಾದ ಸಮಿತಿಯ ಧ್ಯಮಗಳಲ್ಲಿ ಜಾಹೀರಾತು ಪ್ರಕಟಸಿದ್ದು ಸಲಹೆ ನೀಡುವಂತೆ ಕೇಳಲಾಗಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು,ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ.