ಬೆಂಗಳೂರು, ಜು. 31 :ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ನ್ ಬಿಗ್ ರಿಲೀಫ್ ನೀಡಿದೆ,ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.ಈ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದರೆ, ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.