Revenue Facts

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌ ನೀಡಿದ ಸುಪ್ರೀಂ ಕೋರ್ಟ್

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌ ನೀಡಿದ ಸುಪ್ರೀಂ ಕೋರ್ಟ್

#Supreme Court #granted #temporary relief # CM Siddaramaiah

ಬೆಂಗಳೂರು : ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇಂದು ಫೆ(19) ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಿತು. ಮುಖ್ಯಮಂತ್ರಿ ವಿರುದ್ಧ ದಾಖಲಾಗಿರುವ ಎಫ್‌ಐಆರ್‌(FIR) ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿತು.ಪ್ರತಿಭಟನೆಯಿಂದ ಸಂಚಾರ ದಟ್ಟನೆಯಾಗಿದೆ ಎಂಬ ಆರೋಪದಡಿ CM ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ FIR ರದ್ದು ಕೋರಿ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ನಿರಾಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಮುಂದಿನ ಆದೇಶದವರೆಗೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿ ಆದೇಶಿಸಿದೆ. ಈ ಹಿಂದಿನ BJP ಸರ್ಕಾರದ ಸಚಿವ K.S.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತುಸಿಎಂ ಸಿದ್ದರಾಮಯ್ಯ ಅವರ ಪರ ಸುಪ್ರಿಂಕೋರ್ಟ್‌ನಲ್ಲಿ ಕಪಿಲ್‌ ಸಿಬಲ್. ಮತ್ತು ಅಭಿಶೇಕ್‌ ಸಿಂಗ್ವಿ ಅವರ ವಾದವನ್ನು ಮಂಡಿಸಿದ್ದರು. ಹೈಕೋರ್ಟ್‌(Highcourt) ನೀಡಿದ್ದ ತೀರ್ಪಿನ ವಿರುದ್ಧ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್‌, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯೂ ಆದ ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಅವರಿಗೆ ತಲಾ ₹ 10,000 ದಂಡ ವಿಧಿಸಿದ್ದ ಹೈಕೋರ್ಟ್‌, ಎಲ್ಲರೂ ‌ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಫೆಬ್ರುವರಿ 6ರಂದು ತೀರ್ಪು ನೀಡಿತ್ತು.

Exit mobile version