28.2 C
Bengaluru
Wednesday, July 3, 2024

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್‌ ಆದೇಶ

ಬೆಂಗಳೂರು;ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಆದೇಶ 370ನೇ ಕಲಂ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್, ಜಮ್ಮು ಕಾಶ್ಮೀರ(Jammu and Kashmir) ವಿಧಾನಸಭೆಗೆ ಚುನಾವಣೆಗೆ ನಡೆಸುವಂತೆ ನಿರ್ದೇಶನ ನೀಡಿದೆ. ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಿ ಎಂದು ಸೂಚನೆ ನೀಡಿರುವ ಸುಪ್ರೀಂಕೋರ್ಟ್(Supremecourt), 2024ರ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಬೇಕೆಂದು ಸೂಚನೆ ನೀಡಿದೆ. ಹಾಗೆಯೇ, 370 ಕಲಂ ರದ್ದುಗೊಳಿಸಿ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.ಸುಪ್ರೀಂಕೋರ್ಟ್‌ ತೀರ್ಪಿನ ನಂತರ ಜಮ್ಮು ಕಾಶ್ಮೀರಕ್ಕೆ ಇದ್ದ ಹಲವಾರು ವಿಶೇಷ ಸ್ಥಾನಮಾನದ ಸೌಲಭ್ಯಗಳು ರದ್ದಾಗಲಿವೆ. ಎಲ್ಲಾ ರಾಜ್ಯಗಳಂತೆ ಜಮ್ಮು ಕಾಶ್ಮೀರವೂ ಏಕರೂಪದ ಕಾನೂನು ಹೊಂದಲಿದೆ. ಈಗಾಗಲೇ ಜಮ್ಮು ಕಾಶ್ಮೀರದಲ್ಲಿ ಕೆಲವು ವಿಧಾನಸಭೆ ಕ್ಷೇತ್ರಗಳನ್ನು ಹೆಚ್ಚಿಸಿ ಚುನಾವಣೆ ನಡೆಸುವುದಕ್ಕೆ ಬೇಕಾದ ತಯಾರಿಯನ್ನು ಆಯೋಗ ಮಾಡಿಕೊಂಡಿದೆ. ಲೋಕಸಭೆ ಚುನಾವಣೆಯೊಂದಿಗೆ ವಿಧಾನಸಭೆಗೂ ಚುನಾವಣೆ ನಡೆಯಬಹುದು,ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್ 5 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತು. ಇಂದಿಗೆ ಕಾಯ್ದಿರಿಸಿದ್ದಂತ ತೀರ್ಪನ್ನು ಇದೀಗ ಪ್ರಕಟಿಸಿದೆ.ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.370 (1) (ಡಿ) ವಿಧಿಯನ್ನು ಬಳಸಿಕೊಂಡು ಭಾರತದ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಒಂದೇ ಬಾರಿಗೆ ಅನ್ವಯಿಸಬಹುದು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ.

Related News

spot_img

Revenue Alerts

spot_img

News

spot_img