Revenue Facts

ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ

ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ

ಬೆಂಗಳೂರು: ರಾಜ್ಯ ಹೈಕೋರ್ಟ್‌ ಹೆಚ್ಚುವರಿ ಮೂವರು ನ್ಯಾಯಮೂರ್ತಿಗಳಾಗಿ ನ್ಯಾಯ ಮೂರ್ತಿಗಳು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ರಾಜಭವನದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಗುರುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ನ್ಯಾಯಮೂರ್ತಿಗಳಾದ ಅನಂತ ರಾಮ ನಾಥ ಹೆಗಡೆ, ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ಸಿದ್ದಯ್ಯ ರಾಚಯ್ಯ ಅವರಿಗೆ – ನ್ಯಾಯಮೂರ್ತಿಗಳಾಗಿ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.ಕಾರ್ಯಕ್ರಮದ ಸ್ವಾಗತವನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದರು.ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ನ್ಯಾಯಮೂರ್ತಿ ಹೈಕೋರ್ಟ್ ಗಳು, ನ್ಯಾಯಮೂರ್ತಿಗಳ ಕುಟುಂಬ ಸದಸ್ಯರು, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಇದ್ದರು.

Exit mobile version