ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪಟಾಕಿ ಘಟಕವೊಂದರಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ.ಅರಿಯಾಲೂರು ಜಿಲ್ಲೆಯ ವೀರಾಗಲೂರು ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ತಲಾ ₹ 3 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.ಅವಘಡದಲ್ಲಿ ಗಾಯಗೊಂಡವರನ್ನು ತಂಜಾವೂರಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು,ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. 10 ಜನ ಕಾರ್ಮಿಕರು ಸಜೀವ ದಹನ ಹೊಂದಿದ್ದಾರೆ. ಇಬ್ಬರ ಮೃತದೇಹಗಳು ಮಾತ್ರ ಪತ್ತೆಯಾಗಿವೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.ಘಟಕದ ಸಮೀಪ ಹೋಗುವ ಆಗದಷ್ಟು ಬೆಂಕಿ ತೀವ್ರತೆ ಇದೆ. ಜತೆಗೆ ಪಟಾಕಿ ಸಿಡಿತದಿಂದ ಹತ್ತಿರ ಹೋಗಲು ಸಾಧ್ಯವಾಗುತ್ತಿಲ್ಲ. ಇನ್ನು ಈ ಅವಘಡಲ್ಲಿ 8ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿವೆ.