21.1 C
Bengaluru
Monday, December 23, 2024

ತೆರಿಗೆ ವಂಚನೆ: ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ಇಂದು (ಅಕ್ಟೋಬರ್ 12) ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಡಾಲರ್ಸ್‌ ಕಾಲೋನಿ, ಮತ್ತಿಕೆರೆ ಸೇರಿದಂತೆ ನಗರದ 10ಕ್ಕೂ ಹೆಚ್ಚು ಕಡೆ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ವಾರ ಚಿನ್ನದ ವ್ಯಾಪಾರಿಗಳು, ಉದ್ಯಮಿಗಳ ಮೇಲೆ ದಾಳಿ ಐಟಿ ದಾಳಿ ಮಾಡಿತ್ತು. ನಿನ್ನೆ ಹೊಸ ಕೋಟೆಯ ಬಿರಿಯಾನಿ ಹೋಟೆಲ್‌ಗಳ ಮೇಲೆ ರೇಡ್ ಮಾಡಿದ್ದ ವಾಣಿಜ್ಯ ತೆರಿಗೆ ಅಧಿಕಾರಿಗಳು ಬಿರಿಯಾನಿ ಸೆಂಟ‌ಗಳ 30 ಯುಪಿಐ ವಿವಿಧ ಖಾತೆಗಳನ್ನು ಪತ್ತೆ ಹಚ್ಚಿ, ಮಾಲೀಕರ ಮನೆಯಿಂದ 11.47 ಕೋಟಿ ನಗದು ವಶಕ್ಕೆ ಪಡೆದಿದ್ದರು.ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಇದೀಗ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

Related News

spot_img

Revenue Alerts

spot_img

News

spot_img