ತುಮಕೂರು: ಭೂ ಪರಿವರ್ತನೆ(Land conversion) ಮಾಡಲು ಲಂಚ(Bribe) ಪಡೆದು ಲೋಕಾಯುಕ್ತ ಅಧಿಕಾರಿಗಳಿಗೆ ತಹಶೀಲ್ದಾರ್ ರೆಡ್ ಹ್ಯಾಂಡ್ ಅ ಸಿಕ್ಕಿಬಿದ್ದಿರುವ ಘಟನೆ ಸಂಜೆ ನಡೆದಿದೆ.ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ಚಿಕ್ಕನಾಯಕನಹಳ್ಳಿಯಲ್ಲಿ ತಹಶೀಲ್ದಾರ್ ಕಾರ್ಯ ನಿರ್ವಹಿಸುತ್ತಿದ್ದರು.ಗೋಡೆಕೆರೆ ಗ್ರಾಮದ ರೈತ (Farmer) ಮಲ್ಲಿಕಾರ್ಜುನ್ಗೆ ಸೇರಿದ 33 ಗುಂಟೆ ಜಮೀನನ್ನ ಭೂ ಪರಿವರ್ತನೆ (Land conversion) ಮಾಡಿಕೊಡಲು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ನಿನ್ನೆ ಬೆಳಗ್ಗೆ 20 ಸಾವಿರ ಹಣ ರೂಪಾಯಿ ಪಡೆದಿದ್ದ ತಹಶೀಲ್ದಾರ್ ಗೀತಾ, ನಿನ್ನೆ ಸಂಜೆ 30 ಸಾವಿರ ರೂಪಾಯಿ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.ಸಂಜೆ ರೈತ ಮಲ್ಲಿಕಾರ್ಜುನ್ ಅವರನ್ನು ತಹಸೀಲ್ದಾರ್ ಗೀತಾ ಅವರು, ಮನೆಗೆ ಕರೆಸಿಕೊಂಡು ಲಂಚ ಸ್ವೀಕರಿಸುವ ವೇಳೆ ತುಮಕೂರು ಲೋಕಾಯುಕ್ತ ಡಿವೈಎಸ್ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಸದ್ಯ ಗೀತಾ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ತಹಸೀಲ್ದಾರ್ ವಸತಿ ಗೃಹದಲ್ಲಿ ತನಿಖೆ ನಡೆಸಿದ್ದಾರೆ.
33 ಗುಂಟೆ ಜಮೀನು ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್
by RF Desk