24.8 C
Bengaluru
Sunday, May 19, 2024

Karnataka Election Schedule; ವಿಧಾನಸಭೆ ಚುನಾವಣೆಗೆ ಇಂದೇ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.ಹೊಸದಿಲ್ಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ಡೇಟ್​ ಜೊತೆಗೆ ನೀತಿ ಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ.2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ.ಈ ಬಾರಿ ಎರಡು ದಿನ ತಡವಾಗಿ ಚುನಾವಣೆ ಘೋಷಣೆ ಆಗುತ್ತಿದೆ.

ಇತ್ತೀಚೆಗೆ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿತ್ತು. ಚುನಾವಣಾ ಕಾರ್ಯದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳ ವರ್ಗಾವಣೆಯನ್ನು ನಿಲ್ಲಿಸುವಂತೆಯೂ ಇಸಿಐ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

Related News

spot_img

Revenue Alerts

spot_img

News

spot_img