Revenue Facts

ಕರ್ನಾಟಕ ಹೈಕೋರ್ಟ್ ಗೆ ಇಬ್ಬರು ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಶಿಫಾರಸು

ಕರ್ನಾಟಕ ಹೈಕೋರ್ಟ್ ಗೆ ಇಬ್ಬರು ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಶಿಫಾರಸು

ಬೆಂಗಳೂರು ಫೆಬ್ರವರಿ 7: ಕರ್ನಾಟಕ ಹೈಕೋರ್ಟ್‌ಗೆ ಮತ್ತೆ ಇಬ್ಬರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಪರ ವಕೀಲರಾಗಿದ್ದ ವಿಜಯಕುಮಾರ್ ಎ.ಪಾಟೀಲ್ ಹಾಗೂ ಹೈಕೋರ್ಟ್‌ ವಕೀಲ ರಾಜೇಶ್‌ ರೈ ಕಲ್ಲಂಗಳ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ – ಅಧಿಸೂಚನೆ ಹೊರಡಿಸಿದ ಕೇಂದ್ರ ಕಾನೂನು ಸಚಿವಾಲಯ. ಇನ್ನು ಇಂದು ಐವರು ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸರ್ಕಾರದ ಪರ ವಕೀಲರಾಗಿದ್ದ ವಿಜಯಕುಮಾರ್ ಎ.ಪಾಟೀಲ್ ಹಾಗೂ ಹೈಕೋರ್ಟ್‌ ವಕೀಲ ರಾಜೇಶ್‌ ರೈ ಕಲ್ಲಂಗಳ ಅವರನ್ನು ರಾಜ್ಯ ಹೈಕೋರ್ಟ್​ನ ಹೆಚ್ಚುವರಿ ನ್ಯಾಯ ಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕೇಂದ್ರ ಕಾನೂನು ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ. ಇಬ್ಬರೂ ಎರಡು ವರ್ಷಗಳ ಕಾಲ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕೆಲಸ ನಿರ್ವಹಿಸಲಿದ್ದು ನಂತರ ಅವರ ಸೇವೆಕಾಯಂಗೊಳ್ಳಲಿದೆ.

ಇತ್ತೀಚೆಗಷ್ಟೇ ರಾಮಚಂದ್ರ ಡಿ.ಹುದ್ದಾರ ಹಾಗೂ ವೆಂಕಟೇಶ್ ಟಿ.ನಾಯಕ್‌ ಅವರನ್ನು ಜಿಲ್ಲಾ ಪ್ರಧಾನ ನ್ಯಾಯಾಧೀಶರ ವಿಭಾಗದಿಂದ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲಾಗಿತ್ತು. ಕೆಲವೇ ದಿನಗಳ ಅಂತರದಲ್ಲಿ ಹೈಕೋರ್ಟ್‌ ವಕೀಲರ ವಿಭಾಗದಿಂದ ಇಬ್ಬರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಮೂಲತಃ ಉತ್ತರ ಕರ್ನಾಟಕ ಭಾಗದ ವಿಜಯಕುಮಾರ್‌ ಪಾಟೀಲ್‌ ಸುಮಾರು 10 ವರ್ಷಗಳಿಂದಲೂ ಸರಕಾರಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜೇಶ್‌ ರೈ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಂಗಾಲದವರು. ಅವರು 1999ರಿಂದ ಹೈಕೋರ್ಟಿನಲ್ಲಿ ವಕೀಲಿಕೆ ಮಾಡುತ್ತಿದ್ದು, ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸುಗಳನ್ನು ನಡೆಸುವುದರಲ್ಲಿ ಖ್ಯಾತರಾಗಿದ್ದಾರೆ.ಹೈಕೋರ್ಟಿನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕುಲಬುರಗಿ ಪೀಠಗಳಿಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆ ಮಂಜೂರಾಗಿದ್ದು, ಸದ್ಯ 51 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಇಬ್ಬರು ನೇಮಕಗೊಂಡಿರುವುದರಿಂದ ಆ ಸಂಖ್ಯೆ 53ಕ್ಕೆ ಏರಿಕೆಯಾಗಲಿದ್ದು, ಇನ್ನೂ 9 ಹುದ್ದೆಗಳು ಖಾಲಿ ಇರಲಿವೆ.

ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 45ರಿಂದ ಈವರೆಗೂ ಏರಿಕೆ ಆಗಿದ್ದೇ ಇಲ್ಲ. ಇದೇ ಮೊದಲ ಬಾರಿಗೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 50 ದಾಟಿದೆ. ಕಳೆದ ವಾರವಷ್ಟೇ ಐವರು ಜಿಲ್ಲಾ ನ್ಯಾಯಾಧೀಶರಿಗೆ ಬಡ್ತಿ ನೀಡಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

Exit mobile version