27.5 C
Bengaluru
Wednesday, November 6, 2024

ಮುಂದಿನ ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸದಲ್ಲಿ ಸಿಎಂ

ಮೈಸೂರು;ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಸಂಜೆ ಬೆಂಗಳೂರಿನಿಂದ ಮೈಸೂರಿಗೆ ಪ್ರವಾಸ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ಮಾಡಲಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 28 ರಂದು ಮೈಸೂರಿನ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿಲ್ಲಾ ಪಂಚಾಯತ್​ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.ಆಗಸ್ಟ್ 30 ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೊಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯು ಅದ್ದೂರಿಯಾಗಿ ಮೈಸೂರಿನಲ್ಲಿ ಪ್ರಾರಂಭವಾಗಲಿದೆ.ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ. ಸುಮಾರು 2 ಲಕ್ಷ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Related News

spot_img

Revenue Alerts

spot_img

News

spot_img