23.1 C
Bengaluru
Monday, October 7, 2024

ಇಂದು ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪರಿಶೀಲಿಸಲಿರುವ ಸಿಎಂ

ಬೆಂಗಳೂರು, ಜು . 29 :ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇ ಹೆದ್ದಾರಿಯನ್ನು ಪರಿಶೀಲನೆ ನಡೆಸಲಿದ್ದಾರೆ.ಸಕ್ಕರೆ ನಾಡು ಮಂಡ್ಯಕ್ಕೆ ಸಿಎಂ‌ ಸಿದ್ದರಾಮಯ್ಯ ಭೇಟಿ ನೀಡಲಿದ್ದು,ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳ ಬಂದಿರುವ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ,ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ‌ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹೆದ್ದಾರಿ ವೀಕ್ಷಿಸಲಿದ್ದಾರೆ.ಇದೇ ವೇಳೆ ಮೈ-ಬೆಂ‌ ಹೆದ್ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಳವಡಿಸಿರುವ ಹಾಕಿರುವ ಸ್ಪೀಡ್ ಬ್ರೇಕರ್(speed detection)ನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿದ್ದಾರೆ.ಬೆಂಗಳೂರಿನಿಂದ 93 ಕಿಲೋಮೀಟರ್ ದೂರದ ಮಂಡ್ಯದ ಅಮರಾವತಿ ಹೋಟೆಲ್ ಸಮೀಪ ಹಾಗೂ ಗಂಗೂರು ಟೋಲ್ ಪ್ಲಾಜ್ ಸಮೀಪ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇ ಪರಿಶೀಲನೆ ನಡೆಸಲಿದ್ದಾರೆ. ಅಪಘಾತ ತಡೆಗಟ್ಟಲು ಏನೆಲ್ಲಾ ಕ್ರಮ‌ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ.ಸಚಿವ ಚಲುವರಾಯಸ್ವಾಮಿ, ಶಾಸಕರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಿಎಂಗೆ ಸಾಥ್ ನೀಡಲಿದ್ದಾರೆ.

Related News

spot_img

Revenue Alerts

spot_img

News

spot_img