26.7 C
Bengaluru
Sunday, December 22, 2024

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ

ಶಿವಮೊಗ್ಗ;ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿ ಲಂಚಕ್ಕೆ ಬೇಡಿಕೆ ಇಟ್ಟಿದ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ನಿವೇಶನ ಖಾತೆ ಬದಲಾವಣೆಗೆ ಲಂಚಕ್ಕೆ ಕೈಯೊಡ್ಡಿದ್ದ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ನನ್ನು ಬಂಧಿಸಿದ್ದಾರೆ.ಹನುಮಂತ ಎಂಬುವವರಿಂದ ನಿವೇಶನ ಖಾತೆ ಬದಲಾವಣೆಗಾಗಿ ಅರುಣ್ ಕುಮಾರ್ 3 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅರುಣ್ ಕುಮಾರ್ ನನ್ನು ಹನುಮಂತ ಎಂಬುವವರಿಂದ 1.5 ಲಕ್ಷ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್, ಶಿಲ್ಪಾ, ರಾಮಕೃಷ್ಣ ದಾಳಿ ನಡೆಸಿದರು ಎಂದು ತಿಳಿದುಬಂದಿದೆ.

Related News

spot_img

Revenue Alerts

spot_img

News

spot_img