21.2 C
Bengaluru
Tuesday, December 3, 2024

ರಾಜ್ಯದ ಜನತೆಗೆ ಏಪ್ರಿಲ್‌ 1 ರಿಂದ ಮತ್ತೆ ವಿದ್ಯುತ್‌ ದರ ಏರಿಕೆ

ಬೆಂಗಳೂರು: ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ಎಸ್ಕಾಂಗಳು(Escom) ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ(Electricity Tariff Revision) ಮಾಡಲು ಸಿದ್ದತೆ ನಡೆಸುತ್ತಿವೆ. ಈ ಸಂಬಂಧ ಬೆಸ್ಕಾಂ(Bescom) ಸೇರಿ ಇತರೆ ಕಂಪನಿಗಳು ವಿದ್ಯುತ್ ದರ ಏರಿಸುವಂತೆ ಕೆ.ಇ.ಆರ್.ಸಿ ಮುಂದೆ ಪ್ರಸ್ತಾಪ ಇಟ್ಟಿವೆ.ಏಪ್ರಿಲ್ 1(April1) ರಿಂದಲೇ ರಾಜ್ಯಾದ್ಯಂತ ವಿದ್ಯುತ್‌ ದರ ಪ್ರತಿ ಯೂನಿಟ್‌ಗೆ(Unit) 50-60 ಪೈಸೆ ಹೆಚ್ಚಾಗುವ ಸಾಧ್ಯತೆಯಿದೆ. ದರ ಏರಿಕೆ ಮಾಡುವಂತೆ ರಾಜ್ಯದ ಐದೂ ಎಸ್ಕಾಂಗಳು KERCಗೆ ಪ್ರಸ್ತಾವನೆ ಸಲ್ಲಿಸಿವೆ. ಕಲ್ಲಿದ್ದಲು ಖರೀದಿ, ವಿದ್ಯುತ್ ಖರೀದಿ, ಮತ್ತು ವಿದ್ಯುತ್‌ ಸರಬರಾಜು ವೆಚ್ಚ ಸೇರಿದಂತೆ ನಾನಾ ಕಾರಣಗಳಿಂದಾಗಿ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ದರ ಏರಿಕೆ ಮಾಡುವಂತೆ ಮನವಿ ಮಾಡಿವೆ.ಪರಿಷ್ಕೃತ ದರವು 2024ರ ಏ.1ರಿಂದ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ. ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿ (Mescom), ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ (Hescom), ಕಲಬುರಗಿ ವಿದ್ಯುತ್‌ ಸರಬರಾಜು ಕಂಪನಿ (Jescom) ಹಾಗೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿ (Sesc-Mysore) ಸಹ ವಿದ್ಯುತ್‌ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ.ಬೆಸ್ಕಾಂ(Besom) ಸೇರಿ ಇತರೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್ ಗೆ 49 ರಿಂದ 60 ಪೈಸೆಯವರಿಗೂ ವಿದ್ಯುತ್ ದರ ಏರಿಸುವಂತೆ ಬೇಡಿಕೆ ಇಟ್ಟಿವೆ. ಇನ್ನು ಈ ಬಾರಿ ಜನರಿಗೆ ಸಮಸ್ಯೆ ಆಗದಂತೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್(K.J jorge) ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img