20.5 C
Bengaluru
Tuesday, July 9, 2024

ದೇಗುಲಗಳ ಜೀರ್ಣೋದ್ದಾರ ಅನುದಾನಕ್ಕೆ ಸರ್ಕಾರ ಬ್ರೇಕ್ ಹಾಕಿದ ಸರ್ಕಾರ

#Government #brake #grant of restoration #Temples

ಬೆಂಗಳೂರು ಆ 18;ಉಚಿತ ಶಕ್ತಿ  ಯೋಜನೆಯಿಂದಾಗಿ ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚು ಪ್ರಯಾಣಿಸುತ್ತಿದ್ದಾರೆ.ಹೀಗಾಗಿ ಮುಜರಾಯಿ ಇಲಾಖೆಗೆ ಸೇರಿದ ಬಹುತೇಕ ದೇವಸ್ಥಾನಗಳಲ್ಲಿ ಕಾಣಿಕೆ ಹರಿವು ದುಪ್ಪಟ್ಟಾಗಿದೆ. ಇದೀಗ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ.

 

ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ, ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಮತ್ತು ಇನ್ನು ಶೇ.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿದೆ.ಅನುದಾನ ಬಿಡುಗಡೆಗೆ ಮೂರು ನಿರ್ದೇಶನದ ಮೂಲಕ ಹಣ ಹಂಚಿಕೆ ಮಾಡದಂತೆ ಸೂಚನೆ ಎಂದು ದೇವಾವಗಳಿಗೆ ಹಣ ಬಿಡುಗಡೆಗೆ ತಡೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರದ ಆದೇಶದ ವಿರುದ್ಧ ಮುಜರಾಯಿ ಇಲಾಖೆ ಮಾಜಿ ಸಚಿವ ಶಶಿಕಲಾ ಮೇಲೆ ಗರಂ ಆಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಮುಜರಾಯಿ ಇಲಾಖೆಗೆ ಸೇರಿದ ಬಹುತೇಕ ದೇವಸ್ಥಾನಗಳಲ್ಲಿ ಕಾಣಿಕೆ ಹರಿವು ದುಪ್ಪಟ್ಟಾಗಿದೆ.

2022ರ ಜೂನ್​​​ 11ರಿಂದ ಜುಲೈ 15ರವರೆಗೆ 58 ದೇವಾಲಯಗಳಲ್ಲಿ ಇ-ಹುಂಡಿಗಳ ಮೂಲಕ 19 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷ ಬರೋಬ್ಬರಿ 24 ಕೋಟಿ 47 ಲಕ್ಷ ರೂಪಾಯಿ ಆದಾಯ ಬಂದಿದೆ.ರಾಜ್ಯದ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಇ-ಹುಂಡಿಯಲ್ಲಿ ಈ ವರ್ಷ ಜೂನ್​​​​​​​​​11 ರಿಂದ ಜುಲೈ 15 ವರೆಗೆ 11 ಕೋಟಿ 16 ಲಕ್ಷ ರೂ. ಸಂಗ್ರಹವಾಗಿದೆ. ಕೊಪ್ಪಳದ ಹುಲಿಗೆಮ್ಮ, ಕನಕಪುರದ ಕಬ್ಬಾಳಮ್ಮ, ಶ್ರೀರಂಗಪಟ್ಟಣದ ನಿಮಿಷಾಂಬ, ಬೆಂಗಳೂರಿನ ಬನಶಂಕರಿ ದೇವಿ ಸೇರಿ ದೇವಿ ದೇವಾಲಯಗಳಿಗೆ ಭಕ್ತರ ದಂಡಿನ ಜೊತೆ ಕೋಟ್ಯಂತರ ರೂ. ಆದಾಯ ಬಂದಿದೆ.ಕಳೆದ ವರ್ಷ 11 ಕೋಟಿ 13 ಲಕ್ಷ ರೂ. ಸಂಗ್ರಹವಾಗಿತ್ತು. ಯಡಿಯೂರು ಸಿದ್ದಲಿಂಗೇಶ್ವರ ದೇಗುಲದ ಇ-ಹುಂಡಿಯಲ್ಲಿ ಈ ವರ್ಷ 1.48 ಕೋಟಿ ಸಂಗ್ರಹವಾಗಿದ್ರೆ, ಕಳೆದ ವರ್ಷ 1.20ಕೋಟಿ ರೂ. ಸಂಗ್ರಹವಾಗಿತ್ತು.

Related News

spot_img

Revenue Alerts

spot_img

News

spot_img