ಬೆಂಗಳೂರು :ಮಾಜಿ ಸಚಿವ ಆರ್. ಅಶೋಕ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ(BJP) ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ(B.Y vijendra) ನೇತೃತ್ವದಲ್ಲಿ ನಡೆದ ಶಾಸಕಾಂಗ(Legislature) ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿದ್ದರಿಂದ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಒಕ್ಕಲಿಗರಿಗೆ ಕೊಡಬೇಕು ಎಂಬ ಕೂಗು ಕೇಳಿಬಂದಿತ್ತು. ಇನ್ನು, ಯತ್ನಾಳ್ & ರಮೇಶ್ ಜಾರಕಿಹೊಳಿ ಸಭೆ ಬಹಿಷ್ಕರಿಸಿದ್ದರೆ, ST ಸೋಮಶೇಖರ್ ಗೈರಾಗಿದ್ದರು.ಬೆಂಗಳೂರಿನ ಐಟಿಸಿ(ITC) ಹೋಟೆಲ್ ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್ ನಲ್ಲಿ ನಡೆದ ಬಿಎಲ್ ಪಿ ಸಭೆಯಲ್ಲಿ ಹೈಕಮಾಂಡ್(Highcommand) ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.ಶಾಸಕರನ್ನು ಉದ್ದೇಶಿಸಿ ಭಾಷಣದ ವೇಳೆ ವಿಪಕ್ಷ ನಾಯಕರ ವಿಚಾರವಾಗಿ ಹೈಕಮಾಂಡ್ ಸೂಚನೆಯನ್ನು ಸೂಚ್ಯವಾಗಿ ದುಶ್ಯಂತ್ ಕುಮಾರ್ ಗೌತಮ್ ಮತ್ತು ಬಿ.ಎಸ್. ಯಡಿಯೂರಪ್ಪ ಪ್ರಸ್ತಾಪಿಸಿದರು. ಅಶೋಕ್ ಹೆಸರು ಘೋಷಣೆಗೆ ಮಾಜಿ ಸಿಎ ಬಸವರಾಜ ಬೊಮ್ಮಾಯಿ ಸೂಚಿಸಿದರೆ, ಮಾಜಿ ಸಚಿವ ಸುನೀಲ್ ಕುಮಾರ್ ಅನುಮೋದನೆ ಮಾಡಿದರು.