# State Cabinet # responsible # recommendation # internal# reservation # Scheduled Castes
ಬೆಂಗಳೂರು;ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಇರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆ, ಒಳಮೀಸಲಾತಿ ಶಿಫಾರಸಿಗೆ ಒಪ್ಪಿಗೆ ಸೂಚಿಸಿದೆ. ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಎಡಗೈ ಸಮುದಾಯದ ಸಚಿವರು & ಶಾಸಕರು ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುವ ಭರವಸೆಯನ್ನು ಮುಖಂಡರು ನೀಡಿದ್ದರು,ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯ ಮೂರ್ತಿ ಎಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಮಾದಿಗ ಸಮುದಾಯದ ಸಚಿವರು, ಮುಖಂಡರು ಪಟ್ಟು ಹಿಡಿದಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದರು.101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳಮೀಸಲಾತಿ ಕೊಡಲು ಸಾಧ್ಯ ಇಲ್ಲ. ಈ ನಿಟ್ಟಿನಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.